ಮಾಧ್ಯಮಗಳಲ್ಲಿ ತಮ್ಮ ವಿರುದ್ಧ ವರದಿ ಪ್ರಸಾರ ಮಾಡದಂತೆ ಕೋರ್ಟ್ ಗೆ ಅರ್ಜಿ ಸಲ್ಲಿಸಿದ 6 ಸಚಿವರು

Update: 2021-03-05 17:13 GMT

ಬೆಂಗಳೂರು, ಮಾ.5: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಅಶ್ಲೀಲ ಸಿಡಿ ಬಹಿರಂಗಗೊಂಡ ಬೆನ್ನಲ್ಲೇ ಮಾಧ್ಯಮಗಳಲ್ಲಿ ತಮ್ಮ ವಿರುದ್ಧ ವರದಿ ಪ್ರಸಾರ ಮಾಡದಂತೆ ನಿರ್ದೇಶಿಸಲು ಕೋರಿ ಆರು ಜನ ಸಚಿವರು ನಗರದ ಸಿಟಿ ಸಿವಿಲ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ತಮ್ಮ ವಿರುದ್ಧ ಮಾನಹಾನಿಕಾರಿ ಸುದ್ದಿಯನ್ನು ನಿರ್ಬಂಧಿಸುವಂತೆ ಕಾರ್ಮಿಕ ಇಲಾಖೆ ಸಚಿವ ಶಿವರಾಮ್ ಹೆಬ್ಬಾರ್, ಕೃಷಿ ಸಚಿವ ಬಿ.ಸಿ. ಪಾಟೀಲ್, ಕ್ರೀಡಾ ಸಚಿವ ನಾರಾಯಣಗೌಡ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಸಹಕಾರ ಸಚಿವ ಎಸ್. ಟಿ. ಸೋಮಶೇಖರ್, ಮತ್ತು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News