ಗುರುವಾಯನಕೆರೆಯಲ್ಲಿ ಅಪರಿಚಿತ ವೃದ್ಧನ ಶವ ಪತ್ತೆ

Update: 2021-03-05 17:17 GMT

ಬೆಳ್ತಂಗಡಿ: ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗುರುವಾಯನಕೆರೆಯ ಪ್ರಯಾಣಿಕರ ತಂಗುದಾಣದಲ್ಲಿ ಸುಮಾರು 50 ರಿಂದ 60 ವರ್ಷ ಪ್ರಾಯದ ಅಪರಿಚಿತ ವೃದ್ದನ  ಮೃತದೇಹ ಶುಕ್ರವಾರ ಪತ್ತೆಯಾಗಿದೆ.

ಯಾವುದೋ ಖಾಯಿಲೆ ಅಥವಾ ಇನ್ನಿತರ ಕಾರಣದಿಂದ ಮಲಗಿದಲ್ಲಿಯೇ ಮೃತಪಟ್ಟಿರುವಂತೆ ಕಂಡು ಬಂದಿದೆ. ಈ‌  ಬಗ್ಗೆ ಕುವೆಟ್ಟು ಪಂಚಾಯತ್ ಅಭಿವೃದ್ಧಿ ಅಧಿಕಾರಿ‌ ಶಿವಪ್ರಸಾದ್ ನೀಡಿದ‌ ದೂರಿನಂತೆ ಬೆಳ್ತಂಗಡಿ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News