ಕಚ್ಛಾ ಬಾಂಬ್‌ ಎಸೆದ ದುಷ್ಕರ್ಮಿಗಳು: ಆರು ಬಿಜೆಪಿ ಕಾರ್ಯಕರ್ತರಿಗೆ ಗಾಯ

Update: 2021-03-06 08:35 GMT
ಸಾಂದರ್ಭಿಕ ಚಿತ್ರ

ಕೊಲ್ಕತ್ತ: ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಕೆಲವು ದುಷ್ಕರ್ಮಿಗಳು ಕಚ್ಚಾ ಬಾಂಬ್‌ಗಳನ್ನು ಎಸೆದ ಪರಿಣಾಮ ಆರು ಮಂದಿ ಬಿಜೆಪಿ ಕಾರ್ಯಕರ್ತರು ತೀವ್ರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಅವರಲ್ಲಿ ಇಬ್ಬರು ಗಂಭೀರ ಸ್ಥಿತಿಯಲ್ಲಿದ್ದಾರೆ ಎನ್ನಲಾಗಿದೆ.

ಶುಕ್ರವಾರ ರಾತ್ರಿ, ವಿವಾಹದಿಂದ ಹಿಂದಿರುಗುತ್ತಿದ್ದಾಗ ದುಷ್ಕರ್ಮಿಗಳು ಗುಂಪಿನ ಮೇಲೆ ಕಚ್ಚಾ ಬಾಂಬ್‌ಗಳನ್ನು ಎಸೆದಿದ್ದು, ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಕ್ಯಾನಿಂಗ್ ಉಪವಿಭಾಗ ಆಸ್ಪತ್ರೆಗೆ ಸಾಗಿಸಲಾಗಿದೆ. ತಮ್ಮ ಮೇಲೆ ನಡೆದ ಬಾಂಬ್ ದಾಳಿಯ ಹಿಂದೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಇದ್ದಾರೆ ಎಂದು ಗಾಯಾಳು ಬಿಜೆಪಿ ಕಾರ್ಯಕರ್ತರು ಹೇಳಿದ್ದಾರೆ.

ಘಟನೆಯ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದು, ಸದ್ಯ ಗಾಯಾಳುಗಳು ಕ್ಯಾನಿಂಗ್ ಉಪವಿಭಾಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಗಾಯಗೊಂಡವರನ್ನು ಶೋವನ್ ದೇಬ್ನಾಥ್, ವಿಕ್ರಮ್ ಶಿಲ್, ಅರ್ಪಾನ್ ದೇಬ್ನಾಥ್, ಸ್ವಪನ್ ಕುರಳಿ, ಮಹಾದೇವ್ ನಾಯಕ್ ಎಂದು ಗುರುತಿಸಲಾಗಿದೆ.

ಬಿಜೆಪಿ ಮುಖಂಡ ವರುಣ್ ಪ್ರಮಾಣಿಕ್ ಕೆಲವು ದುಷ್ಕರ್ಮಿಗಳ ಜೊತೆಯಲ್ಲಿ ಬಾಂಬ್ ಹಾಕಲು ಪ್ರಯತ್ನಿಸಿದಾಗ ಆರು ಜನರಿಗೆ ಗಂಭೀರ ಗಾಯಗಳಾಗಿವೆ ಎಂದು ಗೋಸಾಬಾ ವಿಧಾನಸಭಾ ಸ್ಥಾನದ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿ ಜಯಂತ್ ನಾಸ್ಕರ್ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News