ಭದ್ರಾವತಿ ಶಾಸಕ ಸಂಗಮೇಶ್ವರ್ ಪುತ್ರನ ಬಂಧನ

Update: 2021-03-06 07:45 GMT
ಬಸವೇಶ್

ಶಿವಮೊಗ್ಗ, ಮಾ.6: ಕಬಡ್ಡಿ ಪಂದ್ಯಾವಳಿ ವೇಳೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧ ಭದ್ರಾವತಿ ಶಾಸಕ ಸಂಗಮೇಶ್ವರ್ ಅವರ ಪುತ್ರ ಬಸವೇಶ್ ರನ್ನು ಭದ್ರಾವತಿ ಹಳೆ ನಗರ ಪೊಲೀಸರು ಶನಿವಾರ ಬೆಳಗ್ಗೆ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. 

ಫೆಬ್ರವರಿ 28ರಂದು ನಡೆದ ಕಬಡ್ಡಿ ಪಂದ್ಯಾವಳಿಯ ಫೈನಲ್ ಪಂದ್ಯದ ಬಳಿಕ ಗಲಾಟೆಯಾಗಿತ್ತು. ಈ ವೇಳೆ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಶಾಸಕ ಸಂಗಮೇಶ್ವರ್ ಸೇರಿದಂತೆ ಅವರ ಕುಟುಂಬದವರ ವಿರುದ್ಧ ಬಿಜೆಪಿ ಮುಖಂಡರು ಪ್ರಕರಣ ದಾಖಲಿಸಿದ್ದರು. 

ಆನಂತರ ಬಸವೇಶ್ ಭದ್ರಾವತಿಯಲ್ಲಿ ತಲೆಮರೆಸಿಕೊಂಡಿದ್ದರು. ಇದೀಗ ಖಚಿತ ಮಾಹಿತಿ ಮೇರೆಗೆ ಭದ್ರಾವತಿ ಪೊಲೀಸರು ಚಿತ್ರದುರ್ಗದಲ್ಲಿ ಅವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. 

ಈ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಈ ತನಕ ಸುಮಾರು 15 ಮಂದಿಯನ್ನು ಬಂಧಿಸಲಾಗಿದೆ. ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಬಸವೇಶ್ ನನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News