×
Ad

ತ್ಯಾಜ್ಯ ಸಂಸ್ಕರಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ: ಮಂಗಲ್ಪಾಡಿ ಗ್ರಾಪಂಗೆ ಮುತ್ತಿಗೆ

Update: 2021-03-06 15:35 IST

ಉಪ್ಪಳ, ಮಾ.6: ಕುಬಣೂರಿನ ತ್ಯಾಜ್ಯ ಸಂಸ್ಕರಣಾ ಘಟಕದ ಅವ್ಯವಸ್ಥೆಯನ್ನು ಪ್ರತಿಭಟಿಸಿ ತ್ಯಾಜ್ಯ ಮುಕ್ತ ಹೋರಾಟ ಸಮಿತಿ ನೇತೃತ್ವದಲ್ಲಿ ಶನಿವಾರ ಬೆಳಗ್ಗೆ ಮಂಗಲ್ಪಾಡಿ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಲಾಯಿತು.

ಉಪ್ಪಳ ಕೈಕಂಬದಿಂದ ಮೆರವಣಿಗೆ ಮೂಲಕ ಆಗಮಿಸಿದ ನೂರಾರು ಮಂದಿ ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕಿದರು.
ಬಳಿಕ ನಡೆದ ಪ್ರತಿಭಟನೆಯನ್ನು ಪರಿಸರ ಹೋರಾಟಗಾರ ಕೂಕಲ್ ಬಾಲಕೃಷ್ಣನ್ ಉದ್ಘಾಟಿಸಿದರು. ಹೋರಾಟ ಸಮಿತಿಯ ಅಧ್ಯಕ್ಷ ಸಂಶುದ್ಧೀನ್ ಅಧ್ಯಕ್ಷತೆ ವಹಿಸಿದ್ದರು.
 ಅಬ್ದುಲ್ ಕರೀಂ ಪೂನಾ, ಮುಹಮ್ಮದ್ ಕೈಕಂಬ, ಸಿ.ಎಂ.ಮೊಯ್ದು ಮೊದಲಾದವರು ನೇತೃತ್ವ ವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News