ಮೈಸೂರು: ಬೆಲೆ ಏರಿಕೆ ಖಂಡಿಸಿ ಜೆಡಿಎಸ್ ಪ್ರತಿಭಟನೆ

Update: 2021-03-06 11:41 GMT

ಮೈಸೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ, ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಜಾತ್ಯತೀತ ಜನತಾದಳದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಗಾಂಧಿ ಸ್ಕೇರ್ ನಲ್ಲಿ ಶನಿವಾರ ಜಮಾಯಿಸಿದ ಪ್ರತಿಭಟನಾಕಾರರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸುತ್ತಿದ್ದರೂ ಈವರೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬೆಲೆ ನಿಯಂತ್ರಣ ಮಾಡುವ ಬದಲಾಗಿ ರಾಜಕೀಯ ಮೇಲಾಟದಲ್ಲಿ ತೊಡಗಿರುವುದು ನಾಚಿಕೆಗೇಡಿನ ಸಂಗತಿ ಎಂದು ಹರಿಹಾಯ್ದರು.

ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆಯಾಗುತ್ತಿದ್ದರೂ ಕೇಂದ್ರ ಸರ್ಕಾರ ಚುನಾವಣಾ ರಾಜಕೀಯದಲ್ಲಿ ತೊಡಗಿರುವುದು ಹಾಸ್ಯಾಸ್ಪದ ಎಂದು ಕಿಡಿಕಾರಿದರು.

ಜನಸಾಮನ್ಯರ ಸರ್ಕಾರ ಗಮನಹರಿಸಬೇಕು. ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಜೆಡಿಎಸ್ ವತಿಯಿಂದ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಶಾಸಕ ಸಾ.ರಾ.ಮಹೇಶ್, ನಗರ ಜೆಡಿಎಸ್ ಅಧ್ಯಕ್ಷ ಚಲುವೇಗೌಡ, ಜಿಲ್ಲಾಧ್ಯಕ್ಷ ಎನ್.ನರಸಿಂಹಸ್ವಾಮಿ, ಸೇರಿ ಹಲವು ಜೆಡಿಎಸ್ ಮುಖಂಡರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News