6 ಸಚಿವರ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸಿ ಕೋರ್ಟ್ ಮಧ್ಯಂತರ ಆದೇಶ

Update: 2021-03-06 12:53 GMT

ಬೆಂಗಳೂರು, ಮಾ.6: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಅಶ್ಲೀಲ ಸಿಡಿ ಬಹಿರಂಗಗೊಂಡ ಬೆನ್ನಲ್ಲೇ ಮಾಧ್ಯಮಗಳಲ್ಲಿ ತಮ್ಮ ವಿರುದ್ಧ ಯಾವುದೇ ಆಕ್ಷೇಪಾರ್ಹ ಸುದ್ದಿಗಳನ್ನು ಪ್ರಸಾರ ಮಾಡದಂತೆ ನಿರ್ಬಂಧ ಹೇರಬೇಕು ಎಂದು ಕೋರಿ ಸರಕಾರದ ಆರು ಮಂದಿ ಸಚಿವರು ಸಲ್ಲಿಸಿದ್ದ ಅರ್ಜಿ ಸಂಬಂಧ ನಗರದ ಸಿಸಿಎಚ್ ಕೋರ್ಟ್ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿ ಮಧ್ಯಂತರ ಆದೇಶ ಹೊರಡಿಸಿದೆ. ಜತೆಗೆ ಎಲ್ಲ ಮಾಧ್ಯಮಗಳಿಗೂ ನೋಟಿಸ್ ಜಾರಿಗೊಳಿಸಿದೆ.

ತಮ್ಮ ವಿರುದ್ಧ ಮಾನಹಾನಿಕಾರಿ ಸುದ್ದಿಯನ್ನು ಪ್ರಸಾರ ಮಾಡದಂತೆ ನಿರ್ಬಂಧಿಸುವಂತೆ ಕಾರ್ಮಿಕ ಇಲಾಖೆ ಸಚಿವ ಶಿವರಾಮ್ ಹೆಬ್ಬಾರ್, ಕೃಷಿ ಸಚಿವ ಬಿ.ಸಿ.ಪಾಟೀಲ್, ಕ್ರೀಡಾ ಸಚಿವ ನಾರಾಯಣಗೌಡ, ಆರೋಗ್ಯ ಸಚಿವ ಡಾ. ಕೆ.ಸುಧಾಕರ್, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಮತ್ತು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಈ ಸಂಬಂಧ ಶನಿವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ಬಿ.ಎಸ್.ವಿಜಯಕುಮಾರ್ ಅವರಿದ್ದ ನ್ಯಾಯಪೀಠ, ಆರು ಮಂದಿ ಸಚಿವರ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿ ಮಧ್ಯಂತರ ಆದೇಶ ಹೊರಡಿಸಿದೆ.

ತಮ್ಮ ವಿರುದ್ಧ ಸುಳ್ಳು, ದಾಖಲೆ ರಹಿತ ಸುದ್ದಿ ಪ್ರಸಾರ ಮಾಡದಂತೆ ನಿರ್ದೇಶನಕ್ಕೆ ಅರ್ಜಿ ಸಲ್ಲಿಸಿದ್ದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News