ಮಾ.13-14: ಉಡುಪಿಯಲ್ಲಿ ವಕೀಲರಿಗಾಗಿ ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆ

Update: 2021-03-06 13:51 GMT

ಉಡುಪಿ, ಮಾ.6: ಉಡುಪಿ ವಕೀಲರ ಸಂಘವು ರಾಜ್ಯದ ಎಲ್ಲಾ ಜಿಲ್ಲೆಗಳ ವಕೀಲರ ಸಂಘಗಳ ಸದಸ್ಯರಿಗಾಗಿ ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ ‘ಉತ್ಸವ-2021’ನ್ನು ಮಾ.13 ಮತ್ತು 14ರಂದು ಉಡುಪಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಿರ್ಮಿಸಿರುವ ತೆರೆದ ಸಭಾಂಗಣದಲ್ಲಿ ಆಯೋಜಿಸಿದೆ.

ಉಡುಪಿ ವಕೀಲರ ಸಂಘದ ಅಧ್ಯಕ್ಷ ದಿವಾಕರ ಶೆಟ್ಟಿ ಅವರು ಇಂದಿಲ್ಲಿ ಕರೆದ ಸುದ್ದಿಗೋಷ್ಠಿ ಯಲ್ಲಿ ಈ ವಿಷಯ ತಿಳಿಸಿದರು. ರಾಜ್ಯದ ವಿವಿಧ ಜಿಲ್ಲೆಗಳ 24ಕ್ಕೂ ಅಧಿಕ ವಕೀಲರ ಸಂಘಗಳು ಸ್ಪರ್ಧೆಯಲ್ಲಿ ಪಾಲ್ಗೊಳ್ಳುವುದನ್ನು ಈಗಾಗಲೇ ಖಚಿತ ಪಡಿಸಿವೆ ಎಂದರು.

ಸಾಂಸ್ಕೃತಿಕ ಸ್ಪರ್ಧೆಯನ್ನು ಮಾ.13ರ ಬೆಳಗ್ಗೆ 10ಗಂಟೆಗೆ ಕರ್ನಾಟಕ ಉಚ್ಛ ನ್ಯಾಯಾಲಯ ನ್ಯಾಯಮೂರ್ತಿಗಳೂ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಕಾರಿ ಅಧ್ಯಕ್ಷರೂ ಆಗಿರುವ ಜ.ಅರವಿಂದ ಕುಮಾರ್ ಉದ್ಘಾಟಿಸಲಿದ್ದಾರೆ. ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಜಾನ್ ಮೈಕೆಲ್ ಕುನ್ಹಾ ಅಧ್ಯಕ್ಷತೆ ವಹಿಸಲಿದ್ದಾರೆ.

ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳೂ, ಉಡುಪಿ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿಗಳೂ ಆದ ಸೂರಜ್ ಗೋವಿಂದ ರಾಜ್ ಮುಖ್ಯ ಅತಿಥಿ ಗಳಾಗಿ, ಉಡುಪಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಸುಬ್ರಹ್ಮಣ್ಯ ಜೆ.ಎನ್. ಗೌರವ ಅತಿಥಿಗಳಾಗಿ ಹಾಗೂ ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಮೋಹನ್ ಆಳ್ವ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು ಎಂದರು.

ಸಮಾರೋಪ ಸಮಾರಂಭ ಮಾ.14ರ ಸಂಜೆ 6:30ಕ್ಕೆ ನಡೆಯಲಿದ್ದು, ರಾಜ್ಯ ಗ್ರಾಹಕರ ವ್ಯಾಜ್ಯ ಪರಿಹಾರ ಆಯೋಗದ ಅಧ್ಯಕ್ಷರಾಗಿರುವ ಜ. ಹುಲುವಾಡಿ ಜಿ.ರಮೇಶ್ ಸಮಾರೋಪ ಭಾಷಣ ಮಾಡಲಿದ್ದಾರೆ. ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ನರಹರಿ ಪ್ರಭಾಕರ ಮರಾಠೆ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್ ಹಾಗೂ ಉಡುಪಿಯ ಉದ್ಯಮಿಗಳಾದ ಡಾ.ಜಿ.ಶಂಕರ್ ಭಾಗವಹಿಸಲಿದ್ದಾರೆ.

ಬಹುಮಾನ: ಸ್ಪರ್ಧೆಯಲ್ಲಿ ಸಮಗ್ರ ಪ್ರಶಸ್ತಿ ಪಡೆಯುವ ತಂಡಕ್ಕೆ ಪ್ರಥಮ ಬಹುಮಾನ 30,000ರೂ.ನಗದು ಹಾಗೂ ಶಾಶ್ವತ ಫಲಕ, ರನ್ನರ್ ಅಪ್ ತಂಡಕ್ಕೆ 20,000ರೂ. ಮತ್ತು ಶಾಶ್ವತ ಫಲಕ ಹಾಗೂ ತೃತೀಯ ಸ್ಥಾನಿ ತಂಡಕ್ಕೆ 10,000ರೂ.ನಗದು ಮತ್ತು ಶಾಶ್ವತ ಫಲಕ ನೀಡಿ ಗೌರವಿಸಲಾಗುವುದು. ಅಲ್ಲದೇ ಅತ್ಯುತ್ತಮ ಕಾರ್ಯಕ್ರಮ ನಿರೂಪಕ, ಅತ್ಯುತ್ತಮ ಸಮೂಹ ನೃತ್ಯ, ಅತ್ಯುತ್ತಮ ಸಮೂಹ ಗಾಯನ, ಅತ್ಯು ತ್ತಮ ವಿಶೇಷ ಪ್ರತಿಭೆ, ಅತ್ಯುತ್ತಮ ಶಿಸ್ತುಬದ್ಧ ತಂಡ, ಅತ್ಯುತ್ತಮ ಸೃಜನಶೀಲ ಪ್ರದರ್ಶನಗಳಿಗೆ ವೈಯಕ್ತಿಕ ಪ್ರಶಸ್ತಿಗಳನ್ನು ನೀಡಿ ಗೌರವಿಸ ಲಾಗುವುದು ಎಂದು ದಿನಕರ ಶೆಟ್ಟಿ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ರೆನೋಲ್ಡ್ ಪ್ರವೀಣ್‌ಕುಮಾರ್, ಉಪಾಧ್ಯಕ್ಷ ಬಿ. ನಾಗರಾಜ್, ಸಾಂಸ್ಕೃತಿಕ ಕಾರ್ಯದರ್ಶಿ ಎಚ್.ರಾಘವೇಂದ್ರ ಶೆಟ್ಟಿ, ಜಿ.ಮೋಹನದಾಸ ಶೆಟ್ಟಿ, ಅಶೀದುಲ್ಲಾ, ಸತೀಶ್ ಪೂಜಾರಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News