ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಘೋಷಣೆ ಕೂಗಿದ್ದ ಕಾಂಗ್ರೆಸ್ ಕಾರ್ಯಕರ್ತರ ಅಮಾನತು

Update: 2021-03-06 14:26 GMT

ಮೈಸೂರು, ಫೆ.6: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಅಮಾನತು ಮಾಡಲಾಗಿದೆ.

ಎನ್.ಆರ್.ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಬೆಂಬಲಿಗರು ಎನ್ನಲಾದ 6 ಮಂದಿ ಕಾಂಗ್ರೆಸ್ ಸದಸ್ಯರನ್ನು ಅಮಾನತು ‌ಮಾಡಿ ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ ಆದೇಶ ಹೊರಡಿಸಿದ್ದಾರೆ.

ಅಮಾನತುಗೊಂಡವರನ್ನು ಶಾಹಿದ್, ಎಂ.ಎನ್.ಲೋಕೇಶ್, ಅಬೀಬ್, ಅಣ್ಣು, ಅಣ್ಣು ಪುತ್ರ ಸೇರಿ ಮತ್ತೊಬ್ಬರನ್ನು ಅಮಾನತು ಮಾಡಲಾಗಿದೆ.

ಈ ಆರು ಮಂದಿ ಶಾಸಕ ತನ್ವೀರ್ ಸೇಠ್ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು ಎನ್ನಲಾಗಿದೆ. ಮೈಸೂರು ಮೇಯರ್ ಚುನಾವಣೆ ಸಂಬಂಧ ಮೇಯರ್ ಸ್ಥಾನವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿದ್ದಕ್ಕೆ ಶಾಸಕ ತನ್ವೀರ್ ಸೇಠ್ ವಿರುದ್ಧ ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದರು. ಜೊತೆಗೆ ತನ್ವೀರ್ ಸೇಠ್ ಅವರಿಗೆ ನೋಟಿಸ್ ಸಹ ನೀಡಲಾಗಿತ್ತು.

ಈ ಹಿನ್ನಲೆಯಲ್ಲಿ ಫೆ.26ರಂದು ಶಾಸಕ ತನ್ವೀರ್ ಸೇಠ್ ಮನೆ ಮುಂದೆ ಸಿದ್ದರಾಮಯ್ಯ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದ್ದರು. ಈ ಹಿನ್ನಲೆಯಲ್ಲಿ ಮುಂದಿನ ಆದೇಶದವರೆಗೆ ಈ 6 ಮಂದಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News