ನಾಲ್ವರು ಐಎಎಸ್ ಅಧಿಕಾರಿಗಳ ವರ್ಗಾವಣೆ

Update: 2021-03-06 14:58 GMT

ಬೆಂಗಳೂರು, ಮಾ.6: ರಾಜ್ಯ ಸರಕಾರವು ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶನಿವಾರ ಆದೇಶ ಹೊರಡಿಸಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ(ಜನಸ್ಪಂದನ)ಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಜಿ.ಕಲ್ಪನಾ ಅವರನ್ನು ಕಾರ್ಮಿಕ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹರಿಕುಮಾರ್ ಝಾ ಅವರನ್ನು ಅರಣ್ಯ ಇಲಾಖೆಯ ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.

ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯದರ್ಶಿ ಮಹೇಶ್ ಬಿ.ಶಿರೂರ್ ಅವರನ್ನು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.

ಕಾರ್ಮಿಕ ಇಲಾಖೆಯ ಆಯುಕ್ತ ಅಕ್ರಮ್ ಪಾಷ ಅವರನ್ನು ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ಅಲ್ಲದೆ, ಕಾರ್ಮಿಕ ಇಲಾಖೆಯ ಆಯುಕ್ತರ ಸ್ಥಾನವನ್ನು ಪ್ರಭಾರಿಯಾಗಿ ವಹಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News