×
Ad

ಬ್ರಹ್ಮಾವರ: ಮಾ. 7ರಂದು ಜನ ಔಷಧಿ ದಿನಾಚರಣೆ

Update: 2021-03-06 21:11 IST

ಉಡುಪಿ, ಮಾ.6: ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾ.7ರಂದು ಜನ ಔಷಧಿ ದಿನಾಚರಣೆಯ ಪ್ರಯುಕ್ತ ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರ ಕಟ್ಟಡದ ಪ್ರಧಾನ ಮಂತ್ರಿ ಬಾರತೀಯ ಜನೌಷಧಿ ಕೇಂದ್ರದಲ್ಲಿ ಬೆಳಗ್ಗೆ 10 ರಿಂದ 12 ಗಂಟೆಯ ವರೆಗೆ ವೀಡಿಯೊ ಕಾನ್ಫರೆನ್ಸ್ ಮೂಲಕ ಜನೌಷಧಿ ಪರಿಯೋಜನೆ ಬಗ್ಗೆ ಸಾರ್ವಜನಿಕರನ್ನು ಉದ್ದೇಶಿಸಿ ನೇರ ಸಂವಾದ ನಡೆಸಲಿರುವರು.

ಕಾರ್ಯಕ್ರಮವನ್ನು ಬೆಳಗ್ಗೆ 10ಕ್ಕೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಇಲಾಖೆ ಸಚಿವ ಡಿ.ವಿ.ಸದಾನಂದ ಗೌಡ ಉದ್ಘಾಟಿಸಲಿರುವರು. ಇದರಲ್ಲಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಕೆ. ಸುಧಾಕರ್, ಗೃಹ, ಕಾನೂನು, ಸಂಸದೀಯ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ, ಮುಜರಾಯಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಇಲಾಖೆ ಸಚಿವ ಎಸ್.ಅಂಗಾರ, ಸಂಸದರಾದ ಶೋಭಾ ಕರಂದ್ಲಾಜೆ, ನಳಿನ್ ‌ಕುಮಾರ್ ಕಟೀಲ್ ಹಾಗೂ ಇತರ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News