ಉಡುಪಿ: ಅಲ್ಲಲ್ಲಿ ಅಂತಾರಾಷ್ಟ್ರೀಯ ಮಹಿಳಾ ಮಹಿಳಾ ದಿನಾಚರಣೆ
ಉಡುಪಿ, ಮಾ.6: ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ ಉಡುಪಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ, ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ, ಚೈತನ್ಯ ಜಿಲ್ಲಾ ಸ್ತ್ರೀ ಶಕ್ತಿ ಒಕ್ಕೂಟ ಉಡುಪಿ ಹಾಗೂ ಸಖಿ ಒನ್‌ಸ್ಟಾಪ್ ಸೆಂಟರ್ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಮಾ.8ರಂದು ಬೆಳಗ್ಗೆ 10 ಗಂಟೆಗೆ ಉಡುಪಿಯ ಬಾಲಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಉಡುಪಿ ಜಿಪಂ ಉಪಾಧ್ಯಕ್ಷೆ ಹಾಗೂ ಉಡುಪಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ಶೀಲಾ ಕೆ ಶೆಟ್ಟಿ ಉದ್ಘಾಟಿಸಲಿದ್ದು, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ಸರಳಾ ಬಿ ಕಾಂಚನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ರೆಡ್‌ಕ್ರಾಸ್: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಾ.8ರಂದು ಬೆಳಗ್ಗೆ 9:30ಕ್ಕೆ ರೆಡ್‌ಕ್ರಾಸ್ ಭವನದಲ್ಲಿ ಆಚರಿಸಲಾಗುವುದು. ಜಿಪಂ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ ಕಾರ್ಯಕ್ರಮ ಉದ್ಘಾಟಿ ಸಲಿದ್ದು, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ಸಭಾಪತಿ ಡಾ. ತಲ್ಲೂರು ಶಿವರಾಮ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.