ಉಡುಪಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟದ ಸಮಾರೋಪ

Update: 2021-03-06 16:01 GMT

ಉಡುಪಿ, ಮಾ.6: ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಮೂರು ದಿನಗಳ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭವು ಶನಿವಾರ ಉಡುಪಿ ಅಜ್ಜರಕಾಡಿನಲ್ಲಿರುವ ಜಿಲ್ಲಾ ಕ್ರೀಡಾಂಗಣದಲ್ಲಿ ಜರಗಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಬಹುಮಾನ ವಿತರಿಸಿದರು. ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಕಚೇರಿ ತಂಡ ಪ್ರಥಮ ಹಾಗೂ ಜಿಲ್ಲಾ ಸಶಸ್ತ್ರ ಮೀಸಲು ಪಡೆ ತಂಡ ದ್ವಿತೀಯ ಬಹುಮಾನ ಗೆದ್ದುಕೊಂಡಿತು.

ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್.ವಿಷ್ಣುವರ್ಧನ್ ವಹಿಸಿದ್ದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ ಸ್ವಾಗತಿಸಿ ದರು. ಉಡುಪಿ ವೃತ್ತ ನಿರೀಕ್ಷಕ ಮಂಜುನಾಥ್ ವಂದಿಸಿದರು. ಪೊಲೀಸ್ ಕಂಟ್ರೋಲ್ ರೂಮ್‌ನ ಪಿಎಸ್ಸೈ ಬಿ.ಮನಮೋಹನ್ ರಾವ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News