ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕುಂದಾಪುರ, ಮಡಿಕೇರಿ ಮಾರ್ಗದಲ್ಲಿ ಫ್ಲೈ ಬಸ್ ಸಾರಿಗೆ ಸಂಚಾರ
Update: 2021-03-06 22:09 IST
ಬೆಂಗಳೂರು, ಮಾ.6: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕೆಂಪೇಗೌಡ ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಡಿಕೇರಿ ಹಾಗೂ ಕುಂದಾಪುರ ಮಾರ್ಗದಲ್ಲಿ ಫ್ಲೈ ಬಸ್ ಸಾರಿಗೆ ಬಸ್ ಕಾರ್ಯಾಚರಣೆ ನಡೆಸಲಿದೆ.
ಬೆಂಗಳೂರಿನ ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಡಿಕೇರಿಗೆ ಒಬ್ಬರಿಗೆ ಒಂದು ಸಾವಿರ ರೂ. ಆಗಿದ್ದು, ಮಧ್ಯಾಹ್ನ 12ಕ್ಕೆ ಬೆಂಗಳೂರಿನಿಂದ ಹೊರಡಲಿದೆ. ಹಾಗೂ ಬೆಂಗಳೂರಿನಿಂದ ಕುಂದಾಪುರಕ್ಕೆ ಒಬ್ಬರಿಗೆ 1,210ರೂ. ಆಗಿದೆ ಎಂದು ಸಾರಿಗೆ ಸಂಸ್ಥೆ ಪ್ರಕಟನೆಯಲ್ಲಿ ತಿಳಿಸಿದೆ.