ರಾಜ್ಯದಲ್ಲಿಂದು 580 ಮಂದಿಗೆ ಕೊರೋನ ಸೋಂಕು ದೃಢ: ಐವರು ಸೋಂಕಿತರು ಸಾವು

Update: 2021-03-06 16:41 GMT

ಬೆಂಗಳೂರು, ಮಾ.6: ರಾಜ್ಯದಲ್ಲಿ ಶನಿವಾರದಂದು 580 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 5  ಜನರು ಸೋಂಕಿಗೆ ಬಲಿಯಾಗಿದ್ದು, 355 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 9,54,393ಕ್ಕೆ ತಲುಪಿದ್ದು, 109 ಜನ ಸೋಂಕಿತರು ಐಸಿಯುನಲ್ಲಿದ್ದಾರೆ.

ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 12359ಕ್ಕೆ ತಲುಪಿದೆ. ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 6594ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

ನಾಲ್ವರು ಸೋಂಕಿತರು ಬಲಿ: ಬೆಂಗಳೂರು ನಗರ 3, ಹಾಸನ 1, ತುಮಕೂರು ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 580 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಳ್ಳಾರಿ 8, ಬೆಳಗಾವಿ 6, ಬೆಂಗಳೂರು ಗ್ರಾಮಾಂತರ 10, ಬೆಂಗಳೂರು ನಗರ 367, ಬೀದರ್ 20, ಚಾಮರಾಜನಗರ 3, ಚಿಕ್ಕಬಳ್ಳಾಪುರ 7, ಚಿಕ್ಕಮಗಳೂರು 5,  ಚಿತ್ರದುರ್ಗ 7, ದಕ್ಷಿಣ ಕನ್ನಡ 27, ದಾವಣಗೆರೆ 7, ಧಾರವಾಡ 7, ಗದಗ 4,  ಹಾಸನ 8, ಹಾವೇರಿ 1, ಕಲಬುರಗಿ 18, ಕೊಡಗು 9, ಕೋಲಾರ 5, ಮಂಡ್ಯ 2, ಮೈಸೂರು 9, ಶಿವಮೊಗ್ಗ 1, ತುಮಕೂರು 13, ಉಡುಪಿ 14, ಉತ್ತರ ಕನ್ನಡ 16, ವಿಜಯಪುರ ಜಿಲ್ಲೆಯಲ್ಲಿ 6 ಪ್ರಕರಣ ಪತ್ತೆಯಾಗಿವೆ.

ರಾಜಧಾನಿಯಲ್ಲಿ 367 ಕೊರೋನ ಪ್ರಕರಣ ದೃಢ

ರಾಜಧಾನಿಯಲ್ಲಿ ಶನಿವಾರದಂದು 367 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಮೂವರು ಮೃತಪಟ್ಟಿದ್ದಾರೆ. 182 ಸೋಂಕಿತರು ಬಿಡುಗಡೆಯಾಗಿದ್ದಾರೆ.

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 407636 ಕೊರೋನ ಸೋಂಕಿತರು ದೃಢಪಟ್ಟಿದ್ದು, 4,496 ಜನರು ಸೋಂಕಿಗೆ ಬಲಿಯಾಗಿದ್ದಾರೆ. 3,98,365 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News