ತಮಿಳುನಾಡು ಚುನಾವಣೆ: ಕಾಂಗ್ರೆಸ್ ಗೆ 25 ಸೀಟುಗಳನ್ನು ಬಿಟ್ಟುಕೊಡಲು ಡಿಎಂಕೆ ನಿರ್ಧಾರ

Update: 2021-03-06 17:41 GMT

ಹೊಸದಿಲ್ಲಿ: ಮುಂದಿನ ತಿಂಗಳು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ತನ್ನ ಮಿತ್ರಪಕ್ಷ ಕಾಂಗ್ರೆಸ್ ಗೆ 25 ಸೀಟುಗಳನ್ನು ಬಿಟ್ಟುಕೊಡಲು ಡಿಎಂಕೆ ನಿರ್ಧರಿಸಿದೆ ಎಂದು ಮೂಲಗಳು NDTV ಗೆ ತಿಳಿಸಿವೆ.

ತಮಿಳುನಾಡು ವಿಧಾನಸಭಾ ಚುನಾವಣೆಯು ಒಂದೇ ಹಂತದಲ್ಲಿ ಎಪ್ರಿಲ್ 6ರಂದು ನಡೆಯಲಿದೆ. ಮತ ಎಣಿಕೆಯು ಮೇ 2ರಂದು ನಡೆಯಲಿದೆ.

ತಮಿಳುನಾಡಿನ ವಿಧಾನಸಭಾ ಚುನಾವಣೆಯು ಆಡಳಿತಾರೂಢ ಎಐಎಡಿಎಂಕೆ ಹಾಗೂ ವಿಪಕ್ಷ ಡಿಎಂಕೆ ನಡುವಿನ ನೇರ ಪೈಪೋಟಿಗೆ ಸಾಕ್ಷಿಯಾಗಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News