×
Ad

ವಿದ್ಯಾರ್ಥಿ ವೇತನಕ್ಕೆ ಇ-ದೃಢೀಕರಣ: ಜಿಲ್ಲಾ ಮಟ್ಟದ ಅಧಿಕಾರಿಗಳ ನಿಯೋಜನೆ

Update: 2021-03-06 23:22 IST

ಬೆಂಗಳೂರು, ಮಾ. 6: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ/ಪಂಗಡ ವಿದ್ಯಾರ್ಥಿಗಳಿಗೆ 2020-21ನೆ ಸಾಲಿನ ವಿದ್ಯಾರ್ಥಿ ವೇತನ ನೀಡಲು ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್ ತಂತ್ರಾಂಶದ ಮೂಲಕ ದಾಖಲೆಗಳನ್ನು ಇ-ದೃಢೀಕರಣ ಮಾಡಲು ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ಅರ್ಜಿ ಸಲ್ಲಿಸಲು ಮಾ.15 ಕೊನೆಯ ದಿನವಾಗಿರುತ್ತದೆ. ವಿದ್ಯಾರ್ಥಿಗಳು ಈ ವೆಬ್‍ಸೈಟ್ https:/ssp.postmatric.karnataka.gov.in/2021 ಮೂಲಕ ಅರ್ಜಿಯನ್ನು ಸಲ್ಲಿಸಲು ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಹೊರ ರಾಜ್ಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು, 2004ರವರೆಗೆ ಎಸೆಸೆಲ್ಸಿ ಅಥವಾ 10ನೆ ತರಗತಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು, 2010ರವರೆಗೆ ಪಿಯುಸಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು, ಪ್ರಸಕ್ತ ಸಾಲಿನಲ್ಲಿ ಪಿಯುಸಿ /ಪದವಿ/ ಇತರೆ ಕೋರ್ಸ್ ಗಳನ್ನು ಕರ್ನಾಟಕದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ, ಸಮಾಜ ಕಲ್ಯಾಣ ಇಲಾಖೆ ಬೆಂಗಳೂರು ನಗರ ಜಿಲ್ಲೆ 080-22240449, ಬೆಂಗಳೂರು ಉತ್ತರ ತಾಲೂಕು ಯಲಹಂಕ 080-28461351/9480843051, ಬೆಂಗಳೂರು ದಕ್ಷಿಣ ತಾಲೂಕು ಬನಶಂಕರಿ 080-26711096/9480843050, ಬೆಂಗಳೂರು ಪೂರ್ವ ತಾಲೂಕು ಕೆ.ಆರ್.ಪುರಂ 080-29535045/9480843049, ಹಾಗೂ ಸಮಾಜ ಕಲ್ಯಾಣ ಇಲಾಖೆ ಆನೇಕಲ್, 080-27859557/9480843052 ಗೆ ಸಂಪರ್ಕಿಸಬಹುದು ಎಂದು ಕೋರಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News