ಪ್ರಧಾನಿ ಮೋದಿ ರ‍್ಯಾಲಿಯಲ್ಲಿ ಬಿಜೆಪಿ ಸೇರಿದ ಬಾಲಿವುಡ್ ನಟ ಮಿಥುನ್‌ ಚಕ್ರವರ್ತಿ

Update: 2021-03-07 08:02 GMT
photo: ANI

ಕೋಲ್ಕತ್ತ: ಬಾಲಿವುಡ್‌ ನ ಖ್ಯಾತ ಹಿರಿಯ ನಟ ಮಿಥುನ್‌ ಚಕ್ರವರ್ತಿ ಬಿಜೆಪಿ ಪಕ್ಷ ಸೇರ್ಪಡೆಗೊಂಡಿದ್ದಾರೆ. ಕೋಲ್ಕತ್ತದಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕ್ರಮದಲ್ಲಿ ಮಿಥುನ್‌ ಚಕ್ರವರ್ತಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಪಕ್ಷದ ಧ್ವಜವನ್ನು ಹಾರಿಸುವ ಮೂಲಕ ಪಶ್ಚಿಮ ಬಂಗಾಳದ ಹಿರಿಯ ಬಿಜೆಪಿ ನಾಯಕರ ಸಮ್ಮುಖದಲ್ಲಿ ಮಿಥುನ್‌ ಚಕ್ರವರ್ತಿ ಬಿಜೆಪಿ ಸೇರ್ಪಡೆಗೊಂಡರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಬಿಜೆಪಿ ನಾಯಕ ಕೈಲಾಶ್‌ ವಿಜಯವರ್ಗೀಯ ಹಾಗೂ ಇನ್ನಿತರ ನಾಯಕರು ಶಾಲು ಹೊದಿಸುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿ ಮಾತನಾಡಲಿದ್ದಾರೆ ಎಂದು ತಿಳಿದು ಬಂದಿದೆ. ಪಶ್ಚಿಮ ಬಂಗಾಳದಲ್ಲಿ ಸದ್ಯ ಚುನಾವಣಾ ಕಾವು ದಿನೇ ದಿನೇ ಏರಿಕೆಯಾಗುತ್ತಿದ್ದು, 8 ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.

ತೃಣಮೂಲ ಕಾಂಗ್ರೆಸ್‌ ನಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಮಿಥುನ್‌ ಚಕ್ರವರ್ತಿ ಅವರು ಶಾರದಾ ಚಿಟ್‌ ಫಂಡ್‌ ಪ್ರಕರಣದಲ್ಲಿ ಸಿಲುಕಿಕೊಂಡಿದ್ದರು. ಎರಡು ವರ್ಷಗಳ ಕಾಲ ರಾಜ್ಯಸಭಾ ಸದಸ್ಯರಾಗಿದ್ದ ಮಿಥುನ್‌ ಚಕ್ರವರ್ತಿ ಬಳಿಕ ಅನಾರೋಗ್ಯದ ಕಾರಣದಿಂದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು,

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News