ರಮೇಶ್ ಜಾರಕಿಹೊಳಿ ನಿರ್ದೋಷಿಯಾಗಿ ಹೊರಬರಲಿದ್ದಾರೆ: ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು

Update: 2021-03-07 14:54 GMT

ಬೆಂಗಳೂರು, ಮಾ. 7: ರಾಸಲೀಲೆ ಪ್ರಕರಣದಲ್ಲಿ ಸಿಲುಕಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಶೀಘ್ರದಲ್ಲೆ ನಿರ್ದೋಷಿಯಾಗಿ ಹೊರ ಬರಲಿದ್ದಾರೆ ಎಂದು ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಇಂದಿಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆರು ಮಂದಿ ಸಚಿವರು ಆಕ್ಷೇಪಾರ್ಹ ಸುದ್ದಿ ಬಿತ್ತರಿಸದಂತೆ ಕೋರ್ಟ್ ನಿಂದ ತಡೆಯಾಜ್ಞೆ ತಂದಿರುವುದು ಸರಿಯಾಗಿದೆ. ಸಿಡಿ ಇದೆ ಎಂದು ಬ್ಲ್ಯಾಕ್‍ಮೇಲ್ ಮಾಡುತ್ತಿರಬಹುದು, ಅದಕ್ಕೆ ಕೋರ್ಟ್ ಮೊರೆ ಹೋಗಿದ್ದಾರೆ. ಇದರಲ್ಲಿ ತಪ್ಪೇನು ಇಲ್ಲ ಎಂದು ಸಮರ್ಥಿಸಿದರು.

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಎಚ್.ವೈ.ಮೇಟಿ ಅವರದ್ದು ಸಿಡಿ ಬಿಡುಗಡೆಯಾಗಿತ್ತು. ಅದೇ ರೀತಿಯಲ್ಲಿ ಇದೀಗ ರಮೇಶ್ ಜಾರಕಿಹೊಳಿ ಅವರ ವಿರುದ್ಧ ಆರೋಪ ಬಂದಿದೆ ಎಂದ ಅವರು, ಇತ್ತೀಚಿನ ದಿನಗಳಲ್ಲಿ ಯಾವುದು ಅಸಲಿ ಮತ್ತು ಯಾವುದು ನಕಲಿ ಎಂಬುದು ಗೊತ್ತಾಗದಂತೆ ಆಗಿದೆ ಎಂದು ಹೇಳಿದರು.

ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸುವುದು ಯಾವುದೇ ಕಾರಣಕ್ಕೂ ತಪ್ಪಲ್ಲ. ಸಚಿವರು ರಕ್ಷಣೆ ಪಡೆದುಕೊಳ್ಳುವುದು ಅಗತ್ಯ. ಸಿಡಿ ಸತ್ಯಾಸತ್ಯತೆ ಅರಿಯುವ ಮೊದಲೇ ಮಾಧ್ಯಮಗಳಲ್ಲಿ ಬಿತ್ತರವಾದರೆ ಅವರ ಪರಿಸ್ಥಿತಿ ಕಷ್ಟಕರ. ಹೀಗಾಗಿ ಅವರು ಅವರು ಕೋರ್ಟ್ ಮೆಟ್ಟಿಲೇರಿದ್ದಾರೆ ಎಂದು ಕಟ್ಟಾ ಸುಬ್ರಹ್ಮಣ್ಯ ನಾಯ್ಡು ನುಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News