ಉಡುಪಿ ಜಿಲ್ಲೆಯಲ್ಲಿ 30ಕ್ಕೇರಿದ ಕೊರೋನ ಪಾಸಿಟಿವ್ ಸಂಖ್ಯೆ

Update: 2021-03-07 15:19 GMT

ಉಡುಪಿ, ಮಾ.7: ರವಿವಾರ ಜಿಲ್ಲೆಯಲ್ಲಿ ಕೊರೋನ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 30ಕ್ಕೇರಿದೆ. ಇದು ಕಳೆದ ನವೆಂಬರ್ 28ರ ಬಳಿಕ ದಿನದ ಅತ್ಯಧಿಕ ಪಾಸಿಟಿವ್ ಸಂಖ್ಯೆಯಾಗಿದೆ. ದಿನದಲ್ಲಿ ಮೂವರು ಸೋಂಕಿ ನಿಂದ ಗುಣಮುಖರಾದರೆ, ಸೋಂಕಿಗೆ ಚಿಕಿತ್ಸೆಯಲ್ಲಿರುವವರ ಸಂಖ್ಯೆ ಹಠಾತ್ತನೆ ಶತಕದ ಗಡಿ (101) ದಾಟಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಬುಲೆಟಿನ್ ತಿಳಿಸಿದೆ.

ಇಂದು ಪಾಸಿಟಿವ್ ಬಂದವರಲ್ಲಿ 16 ಮಂದಿ ಪುರುಷರಾದರೆ 14 ಮಂದಿ ಮಹಿಳೆಯರು. ಇವರಲ್ಲಿ 21ಮಂದಿ ಉಡುಪಿ ತಾಲೂಕಿನವರಾದರೆ, ಇಬ್ಬರು ಕುಂದಾಪುರ ಹಾಗೂ ಏಳು ಮಂದಿ ಕಾರ್ಕಳ ತಾಲೂಕಿನವರು. ಶನಿವಾರ ಮೂವರು ಸೋಂಕಿನಿಂದ ಗುಣಮುಖರಾಗುವ ಮೂಲಕ ಜಿಲ್ಲೆಯಲ್ಲಿ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 23,426ಕ್ಕೇರಿದೆ.

1097ಮಂದಿ ನೆಗೆಟಿವ್: ಶನಿವಾರ ಜಿಲ್ಲೆಯ 1129 ಮಂದಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಇವರಲ್ಲಿ 1097 ಮಂದಿಯ ಪರೀಕ್ಷೆ ನೆಗೆ ಟಿವ್ ಫಲಿತಾಂಶ ನೀಡಿದೆ. ಉಳಿದ 32 ಮಂದಿಯಲ್ಲಿ (ಐಸಿಎಂಆರ್ ವರದಿ) ಸೋಂಕು ಪತ್ತೆಯಾಗಿದೆ. ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 23,717 ಆಗಿದೆ ಎಂದು ಡಾ.ಸೂಡ ತಿಳಿಸಿದರು.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 3,75,946 ಮಂದಿ ಕೋವಿಡ್ ಪರೀಕ್ಷೆಗೊಳಗಾಗಿದ್ದಾರೆ. ಇವರಲ್ಲಿ 3,52,229 ಮಂದಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿವೆ. ಜಿಲ್ಲೆಯಲ್ಲಿ ಇಂದು ಸಹ ಕೋವಿಡ್‌ಗೆ ಯಾರೂ ಬಲಿಯಾಗಿಲ್ಲ. ಜಿಲ್ಲೆಯಲ್ಲಿ ಕೋವಿಡ್‌ನಿಂದ ಸತ್ತವರ ಸಂಖ್ಯೆ 190.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News