ರಾಜ್ಯಕ್ಕೆ ಬರುವ ಕೇರಳ-ಮಹಾರಾಷ್ಟ್ರ ವಾಹನ ಚಾಲಕರಿಗೆ ಕೋವಿಡ್ ಪರೀಕ್ಷಾ ವರದಿ ಕಡ್ಡಾಯ

Update: 2021-03-07 16:38 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಮಾ.7: ಕೋವಿಡ್ ಮುಂಜಾಗ್ರತಾ ಕ್ರಮವಾಗಿ ಕೇರಳ ಹಾಗೂ ಮಹಾರಾಷ್ಟ್ರದಿಂದ ಬರುವ ವಾಹನಗಳ ಚಾಲಕರು ಹಾಗೂ ಸಹಾಯಕರು 15 ದಿನಗಳಿಗೆ ಒಮ್ಮೆ ಆರ್‍ ಟಿಪಿಸಿಆರ್ ಪರೀಕ್ಷಾ ವರದಿ ಹೊಂದುವುದು ಕಡ್ಡಾಯಗೊಳಿಸಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಈ ಕುರಿತು ಸುತ್ತೋಲೆ ಹೊರಡಿಸಿರುವ ಇಲಾಖೆಯು, ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸೋಂಕು ಹರಡದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅದರ ಭಾಗವಾಗಿ ಈ ರಾಜ್ಯಗಳಿಂದ ಬರುವ ಅಗತ್ಯ ವಸ್ತುಗಳ ಸರಕು ಸಾಗಣೆಯ ವಾಹನಗಳ ಚಾಲಕರು, ಸಹಾಯಕರು 15 ದಿನಕ್ಕೊಮ್ಮೆ ಆರ್‍ಟಿ-ಪಿಸಿಆರ್ ಪರೀಕ್ಷೆ ಒಳಪಡುವುದು ಕಡ್ಡಾಯವಾಗಿದೆ.

ಉಳಿದಂತೆ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಕಡ್ಡಾಯ ಮಾಸ್ಕ್, ಸುರಕ್ಷಿತ ಅಂತರ, ಸ್ಯಾನಿಟೈಸ್ ಬಳಕೆ ಸೇರಿದಂತೆ ಕೋವಿಡ್-19 ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸುವುದೂ ಕಡ್ಡಾಯವಾಗಿರುತ್ತದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News