ಕೋವಿಡ್ ಸಮಯದಲ್ಲಿ ಸಂಘ-ಸಂಸ್ಥೆಗಳ ಕಾರ್ಯ ಶ್ಲಾಘನೀಯ: ಜಾಣಗೆರೆ ವೆಂಕಟರಾಮಯ್ಯ

Update: 2021-03-07 18:02 GMT

ಬೆಂಗಳೂರು, ಮಾ.7: ಕೋವಿಡ್‍ ನಂತರ ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ಸಂಘ, ಸಂಸ್ಥೆಗಳು ನಿರ್ವಹಿಸಿದ ಸಾಮಾಜಿಕ ಕಾರ್ಯ ಶ್ಲಾಘನೀಯವಾದುದ್ದೆಂದು ಹಿರಿಯ ಪತ್ರಕರ್ತ ಜಾಣಗೆರೆ ವೆಂಕಟರಾಮಯ್ಯ ಅಭಿಪ್ರಾಯಿಸಿದ್ದಾರೆ.

ದಿವ್ಯ ಚೇತನ ಚಾಟಿಟಬಲ್ ಟ್ರಸ್ಟ್ ನಗರದ ಸಂಸ ಬಯಲು ರಂಗಮಂದಿರದಲ್ಲಿ ಆಯೋಜಿಸಿದ್ದ ಟ್ರಸ್ಟ್ ನ ವಾರ್ಷಿಕೋತ್ಸವ ಹಾಗೂ ನಿವೃತ್ತ ಅಧಿಕಾರಿ ಕೆ.ಎಸ್.ಮುತ್ಯುಂಜಯ ಅವರಿಗೆ ದಿವ್ಯಚೇತನ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಕೋವಿಡ್ ಸಮಯದಲ್ಲಿ ಬಡವರ ಹಸಿವನ್ನು ನೀಗಿಸುವಲ್ಲಿ ಸಂಘ, ಸಂಸ್ಥೆಗಳು ಸಕ್ರೀಯವಾಗಿ ತೊಡಗಿಸಿಕೊಂಡಿದ್ದವು ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಿಶ್ರಾಂತ ನ್ಯಾ.ಕೆ.ಎಚ್.ಮಲ್ಲೇಶ್ವರಪ್ಪ, ಡಾ.ಡಿ.ಎ.ವೆಂಕಟೇಶ್, ಕೇಶಮೂರ್ತಿ, ಅಬಕಾರಿ ಇಲಾಖೆಯ ಹಿರೇಮಠ, ನಿವೃತ್ತ ಜಿಲ್ಲಾಧಿಕಾರಿ ಶಿವಪ್ಪ, ದಿವ್ಯಚೇತನ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಎಂ.ರಾಮು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News