ರಾಜ್ಯ ಬಜೆಟ್ 2021: ಅಲ್ಪಸಂಖ್ಯಾತರ ಅಭಿವೃದ್ಧಿಗೆ 1,500 ಕೋಟಿ ರೂ. ಮೀಸಲಿಟ್ಟ ಸಿಎಂ

Update: 2021-03-08 13:19 GMT

ಬೆಂಗಳೂರು, ಮಾ.8: ಪ್ರಸ್ತುತ ಸಾಲಿನ ಆಯವ್ಯಯದಲ್ಲಿ ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿಗಾಗಿ 1500 ಕೋಟಿ ರೂ. ಮೀಸಲಿಟ್ಟಿರುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಕಟಿಸಿದ್ದಾರೆ.

2021–22ನೇ ಸಾಲಿನ ಮುಂಗಡಪತ್ರ ಮಂಡಿಸಿ, ಮಾತನಾಡಿದ ಅವರು, ರಾಷ್ಟ್ರಕವಿ ಕುವೆಂಪು ಅವರು ಬಣ್ಣಿಸಿದಂತೆ, ಕರ್ನಾಟಕ ಸರ್ವಜನಾಂಗದ ಶಾಂತಿಯ ತೋಟವಾಗಿದೆ. ಎಲ್ಲ ಸಮುದಾಯಗಳ ಸಮಗ್ರ ಅಭಿವೃದ್ಧಿ ಸರಕಾರದ ಆಶಯವಾಗಿದೆ ಎಂದು ಹೇಳಿದ್ದಾರೆ.

2020-21ನೇ ಸಾಲಿನಲ್ಲಿ 400 ಸರಕಾರಿ ಉರ್ದು ಶಾಲೆಗಳಲ್ಲಿ ಆಂಗ್ಲ ಮಾಧ್ಯಮವನ್ನು ಪ್ರಾರಂಭಿಸಲು ಸರಕಾರಿ ಆದೇಶ ಹೊರಡಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಈ ಚಟುವಟಿಕೆಯನ್ನು ಆರಂಭಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅಧೀನದ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಮಾದರಿ ಶಾಲಾ–ಕಾಲೇಜುಗಳಲ್ಲಿ ತಂತ್ರಜ್ಞಾನ ಆಧಾರಿತ ಕಲಿಕಾ ಕಾರ್ಯಕ್ರಮ ಅನುಷ್ಠಾನಗೊಳಿಸಿ, ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಡಿಜಿಟಲ್ ತಂತ್ರಜ್ಞಾನದ ಮೂಲಕ ಎಲ್ಲಾ ವಿಷಯಗಳಲ್ಲಿ ಬೋಧನಾ ಮತ್ತು ಕಲಿಕಾ ಸಾಮರ್ಥ್ಯ ಹೆಚ್ಚಿಸಲಾಗುವುದು ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News