ಅಂತಾರಾಷ್ಟ್ರೀಯ ಮಹಿಳಾ ದಿನದಂದು ಪ್ರತಿಭಟನೆಯನ್ನು ಮುನ್ನಡೆಸಿದ ಮಹಿಳಾ ರೈತರು

Update: 2021-03-08 12:13 GMT
photo: twitter

ಹೊಸದಿಲ್ಲಿ: ಇಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ದಿಲ್ಲಿಯ ಗಡಿ ಪ್ರದೇಶಗಳಾದ ಸಿಂಘು, ಟಿಕ್ರಿ ಹಾಗೂ ಗಾಝಿಪುರ್ ನ ರೈತ ಪ್ರತಿಭಟನೆಯ ಸ್ಥಳಗಳಲ್ಲಿ ಸಾವಿರಾರು ಮಹಿಳಾ ರೈತರು  ಪ್ರತಿಭಟನಾ ಮೆರವಣಿಗೆಗಳನ್ನು ನಡೆಸಿದ್ದಾರೆ ಹಾಗೂ ಭಾಷಣಗಳನ್ನೂ ನೀಡಿದ್ದಾರೆ.

ಇಂದು ಪ್ರತಿಭಟನಾ ಸ್ಥಳಗಳಲ್ಲಿ ಎಲ್ಲಾ ಕೆಲಸಗಳ ನೇತೃತ್ವವನ್ನು ಮಹಿಳೆಯರೇ ವಹಿಸಿಕೊಂಡಿದ್ದಾರೆ. ವೇದಿಕೆಗಳನ್ನು ನಿರ್ವಹಿಸುವುದರ ಜತೆಗೆ ಆಹಾರದ ಏರ್ಪಾಟು, ಭದ್ರತಾ ವ್ಯವಸ್ಥೆಗಳನ್ನೂ ಮಹಿಳೆಯರೇ ನೋಡಿಕೊಂಡಿದ್ದಾರೆ. ತಮ್ಮ ಹೋರಾಟದ ಅನುಭವಗಳನ್ನೂ ಅವರು ಈ ಸಂದರ್ಭ ಹಂಚಿಕೊಂಡಿದ್ದಾರೆ.

ಇಂದಿನ ಎಲ್ಲಾ ಚರ್ಚೆಗಳೂ ಮಹಿಳಾ ರೈತರ ಸುತ್ತವೇ ಕೇಂದ್ರೀಕೃತವಾಗಿವೆ. ಈ ಹೋರಾಟದಲ್ಲಿ ಮಹಿಳೆಯರ ಕೊಡುಗೆಯ ಬಗ್ಗೆಯೂ ಚರ್ಚಿಸಲಾಗಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾದ ಸದಸ್ಯರಾದ ಕುರುಗಂಟಿ ಹೇಳಿದ್ದಾರೆ.

ರೈತ ಹೋರಾಟದಲ್ಲಿ ಭಾಗವಹಿಸುತ್ತಿರುವ ಮಹಿಳೆಯರ ಸಂಖ್ಯೆಯೂ ಹೆಚ್ಚಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಕೃಷಿ ಕಾನೂನುಗಳನ್ನು ರದ್ದುಪಡಿಸುವಂತೆ ಮತ್ತು ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯ ಮೇಲೆ ಕಾನೂನು ಖಾತರಿ ನೀಡುವಂತೆ ಒತ್ತಾಯಿಸಿ ಸಾವಿರಾರು ರೈತರು, ಹೆಚ್ಚಾಗಿ ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದ 100 ದಿನಗಳ ಕಾಲ ದೆಹಲಿ ಗಡಿ ಪ್ರದೇಶಗಳಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News