ಮಾ.10ರಂದು ಪೆರ್ನಾಲ್ ಸಂದೋಲ ಕಾರ್ಯಕ್ರಮ
Update: 2021-03-08 19:18 IST
ಉಡುಪಿ, ಮಾ.8: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಉಡುಪಿ ಜಿಲ್ಲಾ ಬ್ಯಾರಿ ಸಾಂಸ್ಕೃತಿಕ ಮತ್ತು ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಪೆರ್ನಾಲ್ ಸಂದೋಲ ಕಾರ್ಯಕ್ರಮವನ್ನು ಮಾ.10ರಂದು ಬೆಳಗ್ಗೆ 10ಗಂಟೆಗೆ ಉಡುಪಿ ಬ್ರಹ್ಮಗಿರಿ ಲಯನ್ಸ್ ಭವನದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ಮಾಪಕ ಯಾಕುಬ್ ಖಾದರ್ ಗುಲ್ವಾಡಿ ಉದ್ಘಾಟಿಸಲಿರುವರು. ಅಧ್ಯಕ್ಷತೆಯನ್ನು ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ವಹಿಸಲಿರುವರು. ಪೆರ್ನಾಲ್ ಸೌಹಾರ್ದ ಸಂದೇಶವನ್ನು ಬರಹಗಾರ ಅಬೂಬಕ್ಕರ್ ಉಚ್ಚಿಲ ನೀಡಲಿರುವರು. ಬಳಿಕ ಬ್ಯಾರಿ ಸಂಗೀತ ರಸಮಂಜರಿ ಮತ್ತು ದಫ್ ಕಾರ್ಯಕ್ರಮ ಜರಗಲಿದೆ ಎಂದು ಅಕಾಡೆಮಿ ರಿಜಿಸ್ಟ್ರಾರ್ ಪೂರ್ಣಿಮ ಮತ್ತು ಸದಸ್ಯ ಸಂಚಾಲಕ ನಝೀರ್ ಪೊಲ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.