ಮಾ.10ರಂದು ಉಡುಪಿ ಜಿಲ್ಲಾ ಬ್ಯಾರಿ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ ಉದ್ಘಾಟನೆ

Update: 2021-03-08 13:48 GMT

ಉಡುಪಿ, ಮಾ.8: ಉಡುಪಿ ಜಿಲ್ಲಾ ಬ್ಯಾರಿ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ ಇದರ ಉದ್ಘಾಟನಾ ಸಮಾರಂಭವು ಮಾ.10ರಂದು ಬೆಳಗ್ಗೆ 11 ಗಂಟೆಗೆ ಬ್ರಹ್ಮಗಿರಿ ಲಯನ್ಸ್ ಭವನದಲ್ಲಿ ಆಯೋಜಿಸಲಾಗಿದೆ.

ಪರಿಷತನ್ನು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ ಉದ್ಘಾಟಿಸಲಿರುವರು. ಅಧ್ಯಕ್ಷತೆಯನ್ನು ಪರಿಷತ್ ಅಧ್ಯಕ್ಷ ಹಾಜಿ ಎಸ್.ಪಿ. ಉಮರ್ ಫಾರೂಕ್ ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ಮಂಗಳೂರು ಬ್ಯಾರಿ ಸಾಹಿತ್ಯ ಮತ್ತು ಸಂಸ್ಕೃತಿ ಸಂಘದ ಅಧ್ಯಕ್ಷ ಬಶೀರ್ ಬೈಕಂಪಾಡಿ, ಅಕಾಡೆಮಿ ರಿಜಿಸ್ಟ್ರಾರ್ ಪೂರ್ಣಿಮಾ, ಸದಸ್ಯ ನಝೀರ್ ಪೊಲ್ಯ, ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿರ್ಮಾಪಕ ಯಾಕೂಬ್ ಖಾದರ್ ಗುಲ್ವಾಡಿ, ಸಾಹಿತಿ ಟಿ.ಎಸ್. ಹುಸೈನ್ ಕಾಪು ಮೊದಲಾದವರು ಭಾಗವಹಿಸಲಿ ರುವರು ಎಂದು ಪರಿಷತ್ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಹುಸೆನ್ ಬ್ಯಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News