ವಿಧಾನಸಭಾ ಚುನಾವಣೆಗಳ ಹಿನ್ನೆಲೆಯಲ್ಲಿ ಸಂಸತ್ತಿನ ಬಜೆಟ್ ಅಧಿವೇಶನ ಮೊಟಕುಗೊಳ್ಳುವ ಸಾಧ್ಯತೆ

Update: 2021-03-08 14:44 GMT

ಹೊಸದಿಲ್ಲಿ,ಮಾ.8: ಹಲವಾರು ಪಕ್ಷಗಳ ಸದಸ್ಯರು ವಿಧಾನಸಭಾ ಚುನಾವಣೆಗಳಲ್ಲಿ ವ್ಯಸ್ತರಾಗಲಿರುವುದರಿಂದ ಸಂಸತ್ತಿನ ಬಜೆಟ್ ಅಧಿವೇಶನವು ಮೊಟಕುಗೊಳ್ಳುವ ಸಾಧ್ಯತೆಯಿದೆ ಎಂದು ಸಂಸತ್ತಿನಲ್ಲಿಯ ಮೂಲಗಳು ತಿಳಿಸಿವೆ.

 ತಾವು ಚುನಾವಣಾ ಪ್ರಚಾರ ಕಾರ್ಯದಲ್ಲಿ ವ್ಯಸ್ತರಾಗಲಿದ್ದೇವೆ,ಹೀಗಾಗಿ ಬಜೆಟ್ ಅಧಿವೇಶನವನ್ನು ಮೊಟಕುಗೊಳಿಸುವಂತೆ ಕೆಲವು ನಾಯಕರು ಕಲಾಪ ಸಲಹಾ ಸಮಿತಿಯ ಸಭೆಯಲ್ಲಿ ಕೋರಿಕೊಂಡಿದ್ದಾರೆ ಎಂದಿರುವ ಮೂಲಗಳು,ವಿವಿಧ ನಾಯಕರೊಂದಿಗೆ ಮಾತುಕತೆಗಳನ್ನು ನಡೆಸಿರುವ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು,ಅಂತಿಮ ನಿರ್ಧಾರಕ್ಕೆ ಬರುವ ಮುನ್ನ ಸದನದ ಭಾವನೆಯನ್ನು ಗಮನಕ್ಕೆ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ ಎಂದು ತಿಳಿಸಿವೆ.

ತನ್ಮಧ್ಯೆ ರಾಜ್ಯಸಭೆಯು ಮಂಗಳವಾರ ನಿಯಮಿತ ಸಮಯದಲ್ಲಿ ಸೇರಲಿದೆ. ರಾಜ್ಯಸಭೆಯು ಇದನ್ನು ಅಧಿಕೃತವಾಗಿ ಪ್ರಕಟಿಸಿದ್ದರೆ, ಲೋಕಸಭೆಯು ಯಾವುದೇ ಅಧಿಕೃತ ಪ್ರಕಟಣೆಯನ್ನು ಹೊರಡಿಸಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News