ಉಡುಪಿ: ಕರಾವಳಿ ಕಾವಲು ಪೊಲೀಸ್ ಕಚೇರಿಯಲ್ಲಿ ಮಹಿಳಾ ದಿನಾಚರಣೆ

Update: 2021-03-08 15:27 GMT

ಉಡುಪಿ, ಮಾ.8: ಮಲ್ಪೆ ಕರಾವಳಿ ಕಾವಲು ಪೊಲೀಸ್ ಕೇಂದ್ರ ಕಚೇರಿಯಲ್ಲಿ ಸೋಮವಾರ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.

ಕರಾವಳಿ ಕಾವಲು ಪೊಲೀಸ್ ಘಟಕದ ಪೊಲೀಸ್ ಅಧೀಕ್ಷಕ ಚೇತನ್ ಆರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿ ಸಬಲರಾಗುತ್ತಿದ್ದು, ಮಹಿಳೆಯರಿಗೆ ಸೂಕ್ತ ಗೌರವ ನೀಡಬೇಕು ಎಂದರು.

ಈ ಸಂದರ್ಭದಲ್ಲಿ ಯೋಗ ಕ್ಷೇತ್ರದಲ್ಲಿ ಸಾಧನೆಗೈದ ರೇಣುಕಾ ಗೋಪಾಲಕೃಷ್ಣ ಪೆರಂಪಳ್ಳಿ ಇವರನ್ನು ಸನ್ಮಾನಿಸಲಾಯಿತು.

ಮಲ್ಪೆಕರಾವಳಿ ಕಾವಲು ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕಿ ಪುಷ್ಪಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಪೊಲೀಸ್ ಉಪಾಧೀಕ್ಷಕ ಪ್ರವೀಣ್ ಹೆಚ್. ನಾಯಕ್, ಕರಾವಳಿ ಕಾವಲು ಪೊಲೀಸ್ ಕೇಂದ್ರ ಕಚೇರಿಯ ಸಹಾಯಕ ಆಡಳಿತಾಧಿಕಾರಿ ಮಂಜುಳಾ ಗೌಡ, ಪೂಜಾ ನಾಯ್ಕಾ ಹಾಗೂ ಮಹಿಳಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸಿಎಸ್‌ಪಿ ಕೇಂದ್ರ ಕಚೇರಿಯ ಗುಪ್ತ ವಾರ್ತಾ ವಿಭಾಗದ ಪೊಲೀಸ್ ನಿರೀಕ್ಷಕ ಪ್ರಮೋದ್ ಕುಮಾರ್ ಸ್ವಾಗತಿಸಿದರು. ಮಲ್ಪೆ ಕರಾವಳಿ ಕಾವಲು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಅನಂತಪದ್ಮನಾಭ ವಂದಿಸಿದರು. ಕರಾವಳಿ ಕಾವಲು ಪೊಲೀಸ್ ನಿಸ್ತಂತು ಘಟಕದ ಪೊಲೀಸ್ ಉಪನಿರೀಕ್ಷಕ ಮನಮೋಹನ ಕಾರ್ಯಕ್ರಮ ನಿರ್ವಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News