×
Ad

ಕೌಶಲಾಭಿವೃದ್ಧಿಯಿಂದ ಮಹಿಳೆ ಯಶಸ್ವಿ: ಡಾ.ಗಿರಿಜಾ ರಾವ್

Update: 2021-03-08 21:11 IST

ಉಡುಪಿ, ಮಾ.8: ಮಹಿಳೆಯರು ಮಹಿಳಾಭಿವೃದ್ಧಿ ಮತ್ತು ಕೌಶಲಾಭಿವೃದ್ದಿ ಚಟುವಟಿಕೆ ಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿ ಕೊಂಡಲ್ಲಿ ಮಾತ್ರ ಸಮಾಜದಲ್ಲಿ ಯಶಸ್ವಿಯಾಗಲು ಸಾಧ್ಯ ಎಂದು ಮಣಿಪಾಲ ಸೋನಿಯಾ ಕ್ಲಿನಿಕ್ ವೈದ್ಯಾಧಿಕಾರಿ ಡಾ.ಗಿರಿಜಾ ರಾವ್ ಅಭಿಪ್ರಾಯ ಪಟ್ಟಿದ್ದಾರೆ.

ಸೋಮವಾರ ಅಜ್ಜರಕಾಡಿನ ರೆಡ್‌ಕ್ರಾಸ್ ಭವನದಲ್ಲಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತಾನಾಡುತಿದ್ದರು.

ರೆಡ್‌ಕ್ರಾಸ್ ಸಂಸ್ಥೆಯು ಕೋವಿಡ್ ಸಂದರ್ದಲ್ಲಿ ಸಾಕಷ್ಟು ಮಹಿಳೆಯರಿಗೆ ಅಗತ್ಯ ವಸ್ತುಗಳನ್ನು ಪೂರೈಸುವ ಮೂಲಕ ಸಮಾಜ ದಲ್ಲಿ ಉತ್ತಮ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಇಂತಹ ಸಂಸ್ಥೆಗಳಲ್ಲಿ ಮಹಿಳೆಯರು ತಮ್ಮನ್ನು ಪರಿಪೂರ್ಣವಾಗಿ ತೊಡಗಿ ಸಿಕೊಂಡಾಗ ಮಾತ್ರ ಸಮಾಜದ ಮುನ್ನೆಲೆಗೆ ಬರಲು ಸಾಧ್ಯವಾಗುತ್ತದೆ ಎಂದರು.

ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಅಧ್ಯಕ್ಷ ಡಾ.ತಲ್ಲೂರು ಶಿವರಾಂ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಪಂ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ವಿದ್ಯಾರತ್ನ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.

ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಉಪಾಧ್ಯಕ್ಷ ಡಾ.ಅಶೋಕ್‌ಕುಮಾರ್ ಸ್ವಾಗತಿಸಿ, ಡಾ. ಅರವಿಂದ್ ನಾಯಕ್ ಅಮ್ಮುಂಜೆ ವಂದಿಸಿದರು. ಕೆ.ಜಯರಾಮ್ ಸಾಲಿಗ್ರಾಮ ಕಾರ್ಯಕ್ರಮ ನಿರೂಪಿಸಿದರು.

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯು ಕೋಟ ಆರಕ್ಷಕರ ಠಾಣೆಯ ಸಹಾಯಕ ಸಬ್‌ಇನ್ಸ್‌ಪೆಕ್ಟ ಮುಕ್ತ ಮಹೇಶ್‌ಅವರಿಗೆ ಸೇವಾ ಸಾಧಕಿ ಹಾಗೂ ಕ್ರೀಡಾಕ್ಷೇತ್ರದಲ್ಲಿ ಸಾಧನೆಗೈದ ದೈಹಿಕ ಶಿಕ್ಷಕಿ ಹಾಗೂ ಕ್ರೀಡಾ ತರಬೇತುದಾರರಾದ ಶಾಲಿನಿ ಆರ್ ಶೆಟ್ಟಿಗೆ ಕ್ರೀಡಾ ಸೇವಾ ಸಾಧಕಿ ಎಂದು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News