ಕೋಡಿ ಬ್ಯಾರೀಸ್ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ

Update: 2021-03-08 16:26 GMT

ಕುಂದಾಪುರ, ಮಾ.8: ಕೋಡಿ ಬ್ಯಾರೀಸ್ ಪದವಿ ಕಾಲೇಜಿನ ಮಹಿಳಾ ಘಟಕದ ವತಿಯಿಂದ ಇಂದು ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಅರ್ಥ ಪೂರ್ಣವಾಗಿ ಆಚರಿಸಲಾಯಿತು.

ಕುಂದಾಪುರದ ಚೈತನ್ಯ ವಿಶೇಷ ಶಾಲೆಯ ಮುಖ್ಯ ಶಿಕ್ಷಕಿ ಬಿ.ಲೀಲಾವತಿ ಕರ್ಕಡ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ಇದೇ ವೇಳೆ ಕರ್ಕಡ ಅವರ ಸಾಧನೆ ಕುರಿತ ಕಿರುಚಿತ್ರವನ್ನು ಪ್ರದರ್ಶಿಸಲಾಯಿತು. ಅಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ.ಶಮೀರ ವಹಿಸಿದ್ದರು.

ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಯೋಜಕಿ ಮಾಲತಿ ಉಪಸ್ಥಿತ ರಿದ್ದರು. ಮಹಿಳಾ ಘಟಕದ ಸಂಯೋಜಕಿ ಪೂರ್ಣಿಮಾ ಸ್ವಾಗತಿಸಿದರಿ. ವಿದ್ಯಾರ್ಥಿನಿ ಜುಲ್ಫ ವಂದಿಸಿದರು. ಶಾಹಿಜಾ ಸನ್ಮಾನ ಪತ್ರ ವಾಚಿಸಿದರು. ಕಾವ್ಯ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News