ಮಾ.11: ಸಿಪಿಐ ಪ್ರತಿಭಟನೆ

Update: 2021-03-08 16:39 GMT

ಮಂಗಳೂರು, ಮಾ.8: ಪೆಟ್ರೋಲ್,ಡೀಸೆಲ್, ಅಡುಗೆ ಅನಿಲ ಮತ್ತಿತರ ವಸ್ತುಗಳ ವಿಪರೀತ ಹಾಗೂ ಅನಿಯಮಿತ ಬೆಲೆ ಯೇರಿಕೆಯನ್ನು ತಡೆಗಟ್ಟಲು ಕೇಂದ್ರ ಹಾಗೂ ರಾಜ್ಯ ಸರಕಾರಗಳು ವಿಫಲವಾಗಿರುವುದನ್ನು ಖಂಡಿಸಿ ಸಿಪಿಐ ಮಂಗಳೂರು ತಾಲೂಕು ಸಮಿತಿಯ ನೇತೃತ್ವದಲ್ಲಿ ಮಾ.11ರಂದು ಬೆಳಗ್ಗೆ 10:30ಕ್ಕೆ ನಗರದ ಮಿನಿ ವಿಧಾನ ಸೌಧದ ಮುಂದೆ ಪ್ರತಿಭಟನಾ ಪ್ರದರ್ಶನ ನಡೆಸಲಿದೆ ಎಂದು ಸಿಪಿಐ ಮಂಗಳೂರು ತಾಲೂಕು ಸಮಿತಿಯ ಕಾರ್ಯದರ್ಶಿ ವಿ.ಎಸ್. ಬೇರಿಂಜ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News