ಥಾಣೆ ಪ್ಲಾಸ್ಟಿಕ್ ಫ್ಯಾಕ್ಟರಿಯಲ್ಲಿ ಅಗ್ನಿ ಆಕಸ್ಮಿಕ
Update: 2021-03-09 10:55 IST
ಮುಂಬೈ: ಮಹಾರಾಷ್ಟ್ರದ ಮುಂಬೈ ಸಮೀಪದ ಥಾಣೆ ಜಿಲ್ಲೆಯ ಅಸಂಗಾಂವ್ ನಲ್ಲಿರುವ ಪ್ಲಾಸ್ಟಿಕ್ ಫ್ಯಾಕ್ಟರಿಯಲ್ಲಿ ಮಂಗಳವಾರ ಬೆಳಗ್ಗೆ ಅಗ್ನಿ ಆಕಸ್ಮಿಕ ಸಂಭವಿಸಿದೆ.
ಘಟನೆಯ ಬಳಿಕ ಒಟ್ಟು 12 ಅಗ್ನಿಶಾಮಕ ವಾಹನಗಳು ಘಟನಾ ಸ್ಥಳಕ್ಕೆ ಧಾವಿಸಿವೆ. ಬೆಂಕಿ ನಿಯಂತ್ರಿಸುವ ಕಾರ್ಯಾಚರಣೆ ನಡೆಯುತ್ತಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿರುವುದಾಗಿ ಸುದ್ದಿಸಂಸ್ಥೆ ಎಎನ್ ಐ ವರದಿ ಮಾಡಿದೆ.