×
Ad

ಪಶ್ಚಿಮ ಬಂಗಾಳದಲ್ಲಿ 8 ಹಂತದ ಚುನಾವಣೆ ಕುರಿತು ಆಯೋಗವನ್ನು ಪ್ರಶ್ನಿಸಿದ ಅರ್ಜಿಯನ್ನು ತಳ್ಳಿಹಾಕಿದ ಸುಪ್ರೀಂಕೋರ್ಟ್

Update: 2021-03-09 12:02 IST

ಹೊಸದಿಲ್ಲಿ: ಪಶ್ಚಿಮ ಬಂಗಾಳದಲ್ಲಿ ಮಾರ್ಚ್ 27ರಿಂಧ ವಿಧಾನಸಭಾ ಚುನಾವಣೆಯು ಪ್ರಾರಂಭವಾಗಲಿದೆ. ತೃಣಮೂಲ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಪರಸ್ಪರ ಜಿದ್ದಾಜಿದ್ದಿನಲ್ಲಿ ತೊಡಗಿವೆ. ಒಟ್ಟು ಎಂಟು ಹಂತದ ಚುನಾವಣೆಯು ಪಶ್ಚಿಮ ಬಂಗಾಳದಲ್ಲಿ ನಡೆಯಲಿದ್ದು, ಇದು ಬಿಜೆಪಿ ಷಡ್ಯಂತ್ರ ಎಂದು ತೃಣಮೂಲ ಕಾಂಗ್ರೆಸ್ ಆರೋಪಿಸಿತ್ತು. ಇದೀಗ ಈ ಕುರಿತಾದಂತೆ ಅರ್ಜಿಯೊಂದನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ ಎಂದು ANI ವರದಿ ಮಾಡಿದೆ.

ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳ ಚುನಾವಣೆ ನಡೆಸುವುದರ ಕುರಿತು ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿದ ಅರ್ಜಿಯೊಂದನ್ನು ಸುಪ್ರೀಂ ಕೋರ್ಟ್‌ ತಳ್ಳಿ ಹಾಕಿದೆ ಎಂದು ತಿಳಿದು ಬಂದಿದೆ. ಚುನಾವಣಾ ಆಯೋಗದ ಈ ಕುರಿತಾದಂತಹ ಆದೇಶವನ್ನು ತಡೆ ಹಿಡಿಯಬೇಕಾಗಿ ಅರ್ಜಿಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News