×
Ad

ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಕುಸಿದುಬಿದ್ದು ಕೈದಿ ಮೃತ್ಯು

Update: 2021-03-09 15:32 IST

ಶಿವಮೊಗ್ಗ, ಮಾ.9: ಏಳು ವರ್ಷಗಳ ಕಠಿಣ ಶಿಕ್ಷೆಗೆ ಗುರಿಯಾಗಿದ್ದ ಕೈದಿಯೊಬ್ಬರು ಕುಸಿದುಬಿದ್ದು ಮೃತಪಟ್ಟ ಘಟನೆ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಮಂಗಳವಾರ ಸಂಭವಿಸಿದೆ.

ಜಗದೀಶ್ ಶೆಟ್ಟಿ(51) ಮೃತಪಟ್ಟ ಕೈದಿ. ಇವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರೆನ್ನಲಾಗಿದೆ. ಮಂಗಳವಾರ ಜೈಲಿನಲ್ಲಿ ಹಠಾತ್ ಕುಸಿದು ಬಿದ್ದ ಜಗದೀಶ್ ರನ್ನು ತಕ್ಷಣ ಸಿಬ್ಬಂದಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೆಗ್ಗಾನ್ ಆಸ್ಪತ್ರೆಯ ವೈದ್ಯರು ಜಗದೀಶ್ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಜಗದೀಶ್ ಗೆ ಮಂಗಳೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 7 ವರ್ಷಗಳ ಕಠಿಣ ಶಿಕ್ಷೆ ವಿಧಿಸಿತ್ತು. ಅದರಂತೆ 2018ರ ಸೆಪ್ಟಂಬರ್ 2ರಿಂದ ಜಗದೀಶ್ ಶಿವಮೊಗ್ಗ ಕೇಂದ್ರ ಕಾರಾಗೃ-ಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದನು.

ಜಗದೀಶ್ ಮೃತದೇಹವನ್ನು ನಿಯಮದಂತೆ ಮರಣೋತ್ತರ ಪರೀಕ್ಷೆಗೊಳಪಡಿಸಿ, ನಂತರ ಜೈಲು ಅಧಿಕಾರಿಗಳು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News