ಉಡುಪಿ: 12 ಮಂದಿ ಕೋವಿಡ್‌ಗೆ ಪಾಸಿಟಿವ್
ಉಡುಪಿ, ಮಾ.9: ಜಿಲ್ಲೆಯಲ್ಲಿ ಮಂಗಳವಾರ ಇನ್ನೂ 12 ಮಂದಿ ಕೋವಿಡ್‌ಗೆ ಪಾಸಿಟಿವ್ ಬಂದಿದ್ದಾರೆ. ದಿನದಲ್ಲಿ 22 ಮಂದಿ ಸೋಂಕಿನಿಂದ ಗುಣಮುಖರಾದರೆ, ಸೋಂಕಿಗೆ ಚಿಕಿತ್ಸೆಯಲ್ಲಿರುವವರ ಸಂಖ್ಯೆ 103 ಆಗಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಬುಲೆಟಿನ್ ತಿಳಿಸಿದೆ.
ಇಂದು ಪಾಸಿಟಿವ್ ಬಂದವರಲ್ಲಿ ಐವರು ಪುರುಷರು ಹಾಗೂ ಉಳಿದ ಏಳು ಮಂದಿ ಮಹಿಳೆಯರು. ಇವರಲ್ಲಿ ಆರು ಮಂದಿ ಉಡುಪಿ ತಾಲೂಕಿನ ವರಾದರೆ, ತಲಾ ಮೂವರು ಕುಂದಾಪುರ ಹಾಗೂ ಕಾರ್ಕಳ ತಾಲೂಕಿನವರು. ಸೋಮವಾರ 22 ಮಂದಿ ಸೋಂಕಿನಿಂದ ಗುಣಮುಖರಾಗುವ ಮೂಲಕ ಜಿಲ್ಲೆಯಲ್ಲಿ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 23,454ಕ್ಕೇರಿದೆ.
1009 ಮಂದಿ ನೆಗೆಟಿವ್: ಸೋಮವಾರ ಜಿಲ್ಲೆಯ 1020 ಮಂದಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಇವರಲ್ಲಿ 1009 ಮಂದಿಯ ಪರೀಕ್ಷೆ ನೆಗೆಟಿವ್ ಫಲಿತಾಂಶ ನೀಡಿದೆ. ಉಳಿದ 11 ಮಂದಿಯಲ್ಲಿ (ಐಸಿಎಂಆರ್ ವರದಿ) ಸೋಂಕು ಪತ್ತೆಯಾಗಿದೆ. ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 23,747 ಆಗಿದೆ ಎಂದು ಡಾ.ಸೂಡ ತಿಳಿಸಿದರು.
ಜಿಲ್ಲೆಯಲ್ಲಿ ಈವರೆಗೆ ಒಟ್ಟು 3,78,208 ಮಂದಿ ಕೋವಿಡ್ ಪರೀಕ್ಷೆಗೊಳಗಾಗಿದ್ದಾರೆ. ಇವರಲ್ಲಿ 3,54,461 ಮಂದಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿವೆ. ಜಿಲ್ಲೆಯಲ್ಲಿ ಇಂದು ಸಹ ಕೋವಿಡ್‌ಗೆ ಯಾರೂ ಬಲಿಯಾಗಿಲ್ಲ. ಜಿಲ್ಲೆಯಲ್ಲಿ ಕೋವಿಡ್‌ನಿಂದ ಸತ್ತವರ ಸಂಖ್ಯೆ 190 ಆಗಿದೆ.