ಕಾನೂನು ಪ್ರಕಾರ ಜಾರಕಿಹೊಳಿ ಪ್ರಕರಣದ ತನಿಖೆ: ಬಸವರಾಜ ಬೊಮ್ಮಾಯಿ
Update: 2021-03-09 19:44 IST
ಬೆಂಗಳೂರು, ಮಾ.9: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರಕರಣದ ಕುರಿತು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಬಗ್ಗೆ ಬುಕ್ ಆಫ್ ಲಾ(ಕಾನೂನು) ಪ್ರಕಾರ ತನಿಖೆ ನಡೆಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ವಿಚಾರಣೆ ಕಾನೂನು ಪ್ರಕಾರ ನಡೆಯುತ್ತದೆ. ದೂರು ಬಂದ ನಂತರ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ. ಎಲ್ಲವನ್ನೂ ಕಾನೂನು ಪ್ರಕಾರ ತನಿಖೆಗೆ ಒಳಪಡಿಸಲಾಗುವುದು ಎಂದರು.