×
Ad

ಉಡುಪಿ: ಗರ್ಭಪೂರ್ವ, ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಕಾಯ್ದೆ ಕಾರ್ಯಾಗಾರ

Update: 2021-03-09 21:22 IST

ಉಡುಪಿ, ಮಾ.9: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಕ್ಷಮ ಪ್ರಾಧಿಕಾರ ಪಿಸಿ ಪಿಎನ್‌ಡಿಟಿ ಹಾಗೂ ಕಾನೂನು ಸೇವಾ ಪ್ರಾಧಿಕಾರ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆ ಕುರಿತ ಕಾರ್ಯಾಗಾರವೊಂದು ಮಾ.10 ರಂದು ಬೆಳಗ್ಗೆ 10:30ಕ್ಕೆ ಅಜ್ಜರಕಾಡು ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿಯ ಶ್ರೀಕೃಷ್ಣ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಾಗಾರವನ್ನು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ ಉದ್ಘಾಟಿಸಲಿದ್ದು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸುಧೀರ್‌ಚಂದ್ರ ಸೂಡ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News