ಕಾಪು : ಬೈಕ್ ಢಿಕ್ಕಿ; ಪಾದಚಾರಿ ಮೃತ್ಯು
Update: 2021-03-09 21:53 IST
ಕಾಪು : ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಗೆ ಬುಲೆಟ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮಂಗಳವಾರ ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮೂಳೂರಿನಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 66 ಮೂಳೂರಿನ ಎಸ್‍ಎಂ ನರ್ಸರಿ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ಗದಗ ನಿವಾಸಿ ತಾಯಪ್ಪ (37) ಎಂಬವರಿಗೆ ಬೈಕ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದರು. ಇವರನ್ನು ಉಡುಪಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಪ್ರಕರಣ ಕಾಪು ಠಾಣೆಯಲ್ಲಿ ದಾಖಲಾಗಿದೆ.