ಮಾ.11ರಿಂದ ಹಾಲಿನ ದರ 1.50 ರೂ. ಹೆಚ್ಚಳ

Update: 2021-03-09 18:12 GMT
ಸಾಂದರ್ಭಿಕ ಚಿತ್ರ

ಮಂಡ್ಯ, ಮಾ.9: ರೈತರು ಸರಬರಾಜು ಮಾಡುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ ಗೆ 1.50 ರೂ.ಹೆಚ್ಚಳ ಮಾಡಲಾಗಿದೆ ಎಂದು ಮನ್ ಮುಲ್ ಅಧ್ಯಕ್ಷ ಬಿ.ಆರ್.ರಾಮಚಂದ್ರ ತಿಳಿಸಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಮಾ.11 ರಿಂದ ಪ್ರತಿ ಲೀಟರ್ ಹಾಲಿಗೆ 1.50 ಹೆಚ್ಚಳ ಮಾಡಲಾಗಿದೆ.‌ ಎ.1 ರಿಂದ ಮತ್ತೆ ಹಾಲಿನ ಖರೀದಿ ದರವನ್ನು 2 ರೂಪಾಯಿಗೆ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ ಎಂದರು.

ಹಾಲು ಉತ್ಪಾದಕರ ಸಂಘಗಳ ಮೂಲಕ ಒಕ್ಕೂಟಕ್ಕೆ ಸರಬರಾಜು ಮಾಡುವ ಶೇ 3.5 ಜಿಡ್ಡಿನಾಂಶವುಳ್ಳ ಪ್ರತಿ ಲೀಟರ್ ಹಾಲಿಗೆ 26 ರೂಪಾಯಿ ನಿಗದಿಪಡಿಸಲಾಗಿದೆ. ಈಗ ಮಾರುಕಟ್ಟೆಯಲ್ಲಿ ಹಾಲಿನ ಮಾರಾಟ ಹೆಚ್ಚಳ ಆಗುತ್ತಿದೆ. ಒಕ್ಕೂಟದ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಬರುತ್ತಿದೆ. ಹೀಗಾಗಿ ರೈತರ ಮತ್ತು ಹಾಲು ಉತ್ಪಾದಕರ ಸಂಘಗಳ ಹಿತದೃಷ್ಟಿಯಿಂದ ಹಾಲಿನ ಖರೀದಿ ದರವನ್ನು ಹೆಚ್ಚಳ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಮನ್ ಮುಲ್ ಉಪಾಧ್ಯಕ್ಷ ರಘುನಂದನ್, ನಿರ್ದೇಶಕರಾದ ಕೆ.ರಾಮಚಂದ್ರ, ಮಂಜು ಎಚ್.ಟಿ., ನೆಲ್ಲಿಗೆರೆ ಬಾಲು, ರೂಪ, ಕೋಟೆ ರವಿ, ವ್ಯವಸ್ಥಾಪಕ ನಿರ್ದೇಶಕ ಗೋವಿಂದೇಗೌಡ, ಸಾಗರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News