×
Ad

ಶ್ರಮಶಕ್ತಿ ಯೋಜನೆಯ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡಲು ಕ್ರಮ: ಸಚಿವ ಶ್ರೀಮಂತ ಪಾಟೀಲ್

Update: 2021-03-10 23:30 IST

ಬೆಂಗಳೂರು, ಮಾ. 10: ದಕ್ಷಿಣ ಕನ್ನಡ ಜಿಲ್ಲೆಯ ಶ್ರಮಶಕ್ತಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡಲು ಸರಕಾರ ಈಗಾಗಲೇ ಕ್ರಮ ವಹಿಸಿದೆ ಎಂದು ಜವಳಿ ಸಚಿವ ಶ್ರೀಮಂತ ಪಾಟೀಲ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

ಬುಧವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಆಡಳಿತ ಪಕ್ಷದ ಸದಸ್ಯ ಡಾ.ವೈ. ಭರತ್ ಶೆಟ್ಟಿ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, 2017-18ನೆ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶ್ರಮಶಕ್ತಿ ಯೋಜನೆಯಡಿ 3,879 ಮಂದಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ಆಯ್ಕೆಯಾದ ಫಲಾನುಭವಿಗಳಿಗೆ ಈಗಾಗಲೇ 1002.75 ಲಕ್ಷ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದರು.

ಬಾಕಿ ಉಳಿದ 14 ಫಲಾನುಭವಿಗಳಿಗೆ ತಲಾ 25 ಸಾವಿರ ರೂ.ನಂತೆ ಒಟ್ಟು 3,50,000 ರೂ.ಗಳನ್ನು ಮಾತ್ರ ಕೆಎಂಡಿಸಿ ಕೇಂದ್ರ ಕಚೇರಿಯಿಂದ ಜಿಲ್ಲಾ ಕಚೇರಿಗೆ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಎನ್‍ಇಇಟಿ ಮಾಡಲು ಹಣ ಬಿಡುಗಡೆ ಮಾಡಲಾಗಿದೆ ಎಂದು ಶ್ರೀಮಂತ ಪಾಟೀಲ್ ಇದೇ ವೇಳೆ ವಿವರ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News