×
Ad

ಪುತ್ತೂರು : ಗೇರು ಬೀಜ ಗಂಟಲಲ್ಲಿ ಸಿಲುಕಿ ಬಾಲಕ ಮೃತ್ಯು

Update: 2021-03-11 12:29 IST

ಪುತ್ತೂರು : ಗೇರು ಬೀಜ ತಿನ್ನುವಾಗ ಗಂಟಲಲ್ಲಿ ಸಿಲುಕಿ ಬಾಲಕನೋರ್ವ ಮೃತಪಟ್ಟ ಘಟನೆ ಪುತ್ತೂರು ನಗರದ ಹೊರವಲಯದ ಸಾಲ್ಮರ ಊರಮಾಲ್ ಎಂಬಲ್ಲಿ ಬುಧವಾರ ನಡೆದಿದೆ.

ಸಾಲ್ಮರ ನಿವಾಸಿ ಇಸಾಕ್ ಎಂಬವರ ಮೂರುವರೆ ವರ್ಷ ಪ್ರಾಯದ ಪುತ್ರ ಮೃತಪಟ್ಟ ಬಾಲಕ. ಈತ ಮನೆಯಲ್ಲಿ ಗೇರು ಬೀಜ ತಿನ್ನುತ್ತಿದ್ದ ವೇಳೆ ಆಕಸ್ಮಿಕವಾಗಿ ಗಂಟಲಲ್ಲಿ ಸಿಲುಕಿ ಉಸಿರಾಟಕ್ಕೆ ತೊಂದರೆಯಾಗಿ ಅಸ್ವಸ್ತಗೊಂಡಿದ್ದು, ತಕ್ಷಣವೇ  ಬಾಲಕನನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯುದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಈ  ವೇಳೆಗಾಗಲೇ ಬಾಲಕ ಮೃತಪಟ್ಟಿದ್ದಾಗಿ ತಿಳಿದು ಬಂದಿದೆ.

ಸಾಲ್ಮರ ಸಯ್ಯದ್ ಮಲೆ ಮಸೀದಿ ವಠಾರದಲ್ಲಿ ದಫನ ಕಾರ್ಯ ನಡೆಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News