×
Ad

​ಮಂಗಳೂರು ಏರ್‌ಪೋರ್ಟ್‌ನಲ್ಲಿ ಕೋಟಿ ರೂ. ಮೌಲ್ಯದ ಚಿನ್ನ ವಶ

Update: 2021-03-11 18:33 IST
ಸಾಂದರ್ಭಿಕ ಚಿತ್ರ

ಮಂಗಳೂರು, ಮಾ.11: ಬಜ್ಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಮಹಿಳೆಯೊಬ್ಬರು ಒಳ ಉಡುಪಿನಲ್ಲಿ ಬಚ್ಚಿಟ್ಟು ಕೋಟಿ ರೂ. ಮೌಲ್ಯದ ಚಿನ್ನ ಅಕ್ರಮ ಸಾಗಾಟ ಮಾಡುತ್ತಿರುವುದನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.

ಕಾಸರಗೋಡಿನ ಸಮೀರಾ ಬಂಧಿತ ಮಹಿಳೆ. ಈಕೆ ದುಬೈಯಿಂದ ಆಗಮಿಸಿದ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಿದ್ದು, ಕಸ್ಟಮ್ಸ್ ಅಧಿಕಾರಿಗಳು ಈಕೆಯನ್ನು ತಪಾಸಣೆ ನಡೆಸಿದಾಗ 1.10 ಕೋಟಿ ರೂ. ಮೌಲ್ಯದ 2.41 ಕಿ.ಗ್ರಾಂ ಚಿನ್ನ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಕೊಟ್ಪಾ ಕಾಯ್ದೆ ಉಲ್ಲಂಘಿಸಿ ವಿದೇಶಿ ಸಿಗರೇಟ್ ಬಾಕ್ಸ್‌ಗಳನ್ನೂ ಈಕೆ ಸಾಗಾಟ ಮಾಡಿದ್ದು, ಕಸ್ಟಮ್ಸ್ ಅಧಿಕಾರಿಗಳು ಅವೆಲ್ಲವನ್ನು ವಶಕ್ಕೆ ಪಡೆದು, ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಸ್ಟಮ್ಸ್ ಡೆಪ್ಯುಟಿ ಕಮಿಷನರ್ ಡಾ. ಕಪಿಲ್ ಗಾಢೆ, ಸೂಪರಿಟೆಂಡೆಂಟ್‌ಗಳಾದ ಪ್ರೀತಿ ಸುಮಾ, ರಾಕೇಶ್‌ ಕುಮಾರ್ ಹಾಗೂ ಕ್ಷಿತಿ ನಾಯಕ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News