×
Ad

ಔಷಧ ಉತ್ಪಾದನಾ ಘಟಕದಲ್ಲಿ ಸ್ಫೋಟ: ಇಬ್ಬರು ಕಾರ್ಮಿಕರು ಮೃತ್ಯು, ನಾಲ್ವರಿಗೆ ಗಾಯ

Update: 2021-03-11 22:15 IST

ಅಮರಾವತಿ: ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಕಾಕಿನಾಡ ನಗರದ ಸಮೀಪದ ಸರ್ಪವರಂ ಗ್ರಾಮದಲ್ಲಿ ಗುರುವಾರ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಟೈಚ್ ಇಂಡಸ್ಟ್ರೀಸ್ ನಲ್ಲಿ ಮಧ್ಯಾಹ್ನ 3:15ರ ಸುಮಾರಿಗೆ ಸ್ಫೋಟ ಸಂಭವಿಸಿದೆ.

ಗಾಯಗೊಂಡ ಕಾರ್ಮಿಕರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮೃತಪಟ್ಟವರನ್ನು ವೆಂಕಟರಮಣ ಹಾಗೂ ಸುಬ್ರಹ್ಮಣ್ಯಂ ಎಂದು ಗುರುತಿಸಲಾಗಿದೆ.

ಸ್ಫೋಟದಿಂದಾಗಿ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದರು.

ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದ ಕೈಗಾರಿಕಾ ಸಚಿವ ಗೌತಮ್ ರೆಡ್ಡಿ ಅಪಘಾತದ ಕಾರಣದ ಬಗ್ಗೆ ವರದಿ ಸಲ್ಲಿಸುವಂತೆ  ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News