ಪುತ್ತೂರು: ಕೋಟಿ-ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆ
ಪುತ್ತೂರು, ಮಾ.12: ಕಂಬಳವು ಕರಾವಳಿ ಭಾಗದಲ್ಲಿ ಜಾನಪದ ಪರಂಪರೆಯಾಗಿ ಬೆಳೆದು ಬಂದಿದ್ದು, ರೋಮಾಂಚಕವಾಗಿರುವ ಈ ಕ್ರೀಡೆಯ ಬಗ್ಗೆ ಎಲ್ಲರಿಗೂ ಪ್ರೀತಿ ಮೂಡಬೇಕು. ಕಂಬಳದ ಕೋಣಗಳ ಸಂಖ್ಯೆ ಹೆಚ್ಚಾಗಬೇಕು ಎಂದು ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್ ಹೇಳಿದ್ದಾರೆ.
ಅವರು ಶುಕ್ರವಾರ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಳದ ಬಾಕಿಮಾರು ಗದ್ದೆಯಲ್ಲಿ ನಡೆಯುತ್ತಿರುವ 28ನೇ ವರ್ಷದ ಹೊನಲು ಬೆಳಕಿನ ಕೋಟಿ-ಚೆನ್ನಯ ಜೋಡುಕರೆ ಕಂಬಳವನ್ನು ಕರೆಗೆ ತೆಂಗಿನಕಾಯಿ ಒಡೆಯುವ ಮೂಲಕ ಉದ್ಘಾಟಿಸಿ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪುತ್ತೂರು ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್ ಮಾತನಾಡಿ, ಪುತ್ತೂರಿನ ಕಂಬಳವು ದೇವಳದ ಜಾತ್ರಾ ಗದ್ದೆಯಲ್ಲಿ ಪುತ್ತೂರಿನ ಜಾತ್ರೋತ್ಸವ ಮಾದರಿಯಲ್ಲಿ ನಡೆಯುತ್ತಿರುವ ಎರಡನೇ ಉತ್ಸವವಾಗಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ. ಸೀತಾರಾಮ ರೈ ಸವಣೂರು ಮಾತನಾಡಿ, ಕಂಬಳವು ಕರಾವಳಿ ಜಿಲ್ಲೆಯ ಮಣ್ಣಿನ ಕ್ರೀಡೆಯಾಗಿದೆ. ಇದೀಗ ಕಂಬಳವು ಹೊಸ ರೂಪ ಪಡೆದು ಎಲ್ಲರ ಆಕರ್ಷಣೆಗೆ ಒಳಗಾಗುತ್ತಿದೆ. ಕಂಬಳ ಕ್ರೀಡೆಯನ್ನು ಬೆಂಬಲಿಸುವುದು ಎಲ್ಲರ ಕರ್ತವ್ಯ ಎಂದರು.
ನಗರಸಭಾ ಉಪಾಧ್ಯಕ್ಷೆ ವಿದ್ಯಾ ಆರ್. ಗೌರಿ, ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕರುಣಾಕರ ಸುವರ್ಣ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಎಚ್., ಸುಧಾನ ದೇವಾಲಯದ ಧರ್ಮಗುರು ರೆ.ಫಾ. ವಿಜಯ ಹಾರ್ವಿನ್, ಶ್ರೀ ಮಹಾಲಿಂಗೇಶ್ವರ ದೇವಳ ವಠಾರದ ಗಣೇಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ, ಸಂಪ್ಯ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರವೀಂದ್ರ ಶೆಟ್ಟಿ ನುಳಿಯಾಲು, ಪುತ್ತೂರು ಕೇಂದ್ರ ಜುಮಾ ಮಸೀದಿಯ ಅಧ್ಯಕ್ಷ ಎಲ್.ಟಿ.ಅಬ್ದುರ್ರಝಾಕ್ ಹಾಜಿ, ಮಹಾಲಿಂಗ ನಾಯ್ಕ ಪಾಲ್ತಾಡು, ಮಾಜಿ ನಗರ ಅಧ್ಯಕ್ಷ ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿ, ನ್ಯಾಯವಾದಿ ರಹೀಂ, ಕೆಯ್ಯೂರು ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಚೆನ್ನಪ್ಪ ರೈ ದೇರ್ಲ, ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದ ಆಡಳಿತ ಮೊಕ್ತೇಸರ ಅಜಿತ್ ಕುಮಾರ್ ಜೈನ್ ಮಾತನಾಡಿ ಶುಭ ಹಾರೈಸಿದರು.
ವೇದಿಕೆಯಲ್ಲಿ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ದಿನೇಶ್ ಕುಮಾರ್ ಪಿ.ವಿ., ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಪ್ರಸನ್ನ ಹೆಬ್ಬಾರ್, ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದ ಅನುವಂಶಿಕ ಮೊಕ್ತೇಸರ ರಾಮಮೋಹನ ರೈ, ಪರ್ಪುಂಜ ಬ್ರಹ್ಮಬೈದರ್ಕಳ ಗರಡಿಯ ಆಡಳಿತ ಮೊಕ್ತೇಸರ ಸಂಜೀವ ಪೂಜಾರಿ ಕೂರೇಲು, ನ್ಯಾಯವಾದಿ ಫಝ್ಲುಲ್ ರಹೀಂ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರಾಮ್‌ದಾಸ್ ಗೌಡ, ರವೀಂದ್ರ ರೈ ಬಳ್ಳಮಜಲು, ಶೇಖರ ನಾರಾವಿ, ರಾಮಚಂದ್ರ ಕಾಮತ್ ಮತ್ತಿತರರು ಉಪಸ್ಥಿತರಿದ್ದರು.
ಕೋಟಿ-ಚೆನ್ನಯ ಕಂಬಳ ಸಮಿತಿಯ ಅಧ್ಯಕ್ಷ ಎನ್. ಚಂದ್ರಹಾಸ ಶೆಟ್ಟಿ ಸ್ವಾಗತಿಸಿದರು. ಸದಸ್ಯ ವಸಂತ ಕುಮಾರ್ ರೈ ದುಗ್ಗಳ ವಂದಿಸಿದರು. ಉಪಾಧ್ಯಕ್ಷ ನಿರಂಜನ್ ರೈ ಮಠಂತಬೆಟ್ಟು ಕಾರ್ಯಕ್ರಮ ನಿರೂಪಿಸಿದರು.