ಇಂಗ್ಲೆಂಡ್ ವಿರುದ್ದ ಮೊದಲ ಟ್ವೆಂಟಿ-20: ಭಾರತಕ್ಕೆ ಆರಂಭಿಕ ಆಘಾತ

Update: 2021-03-12 14:26 GMT
Photo: twitter

ಅಹಮದಾಬಾದ್: ಆತಿಥೇಯ ಭಾರತ ವಿರುದ್ಧ ಶುಕ್ರವಾರ ಇಲ್ಲಿ ಆರಂಭವಾದ 5 ಪಂದ್ಯಗಳ ಟ್ವೆಂಟಿ-20 ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಇಯಾನ್ ಮೊರ್ಗನ್  ಮೊದಲು ಫೀಲ್ಡಿಂಗ್ ಆಯ್ದುಕೊಂಡರು.

ಬ್ಯಾಟಿಂಗ್ ಗೆ ಆಹ್ವಾನಿಸಲ್ಪಟ್ಟ ಭಾರತವು ಆರಂಭಿಕ ಆಘಾತಕ್ಕೆ ಒಳಗಾಗಿದ್ದು 8 ಓವರ್ ಅಂತ್ಯಕ್ಕೆ 3 ವಿಕೆಟ್ ನಷ್ಟಕ್ಕೆ 35 ರನ್ ಗಳಿಸಿದೆ. ಶ್ರೇಯಸ್ ಅಯ್ಯರ್ (11) ಹಾಗೂ ರಿಷಭ್ ಪಂತ್(19)ಕ್ರೀಸ್ ಕಾಯ್ದುಕೊಂಡಿದ್ದಾರೆ.

ಇನಿಂಗ್ಸ್ ಆರಂಭಿಸಿದ ಶಿಖರ್ ಧವನ್ (4) ಹಾಗೂ ಕನ್ನಡಿಗ ರಾಹುಲ್ (1)ಭಾರತಕ್ಕೆ ಉತ್ತಮ ಆರಂಭ ಒದಗಿಸಲು ವಿಫಲರಾದರು. ನಾಯಕ ವಿರಾಟ್ ಕೊಹ್ಲಿ ಶೂನ್ಯ ಸುತ್ತಿದರು. ರಾಹುಲ್ ಮೊದಲಿಗೆ ವಿಕೆಟ್ ಒಪ್ಪಿಸಿದರೆ, ಕೊಹ್ಲಿ 3ನೇ ಓವರ್ ನಲ್ಲಿ ವಿಕೆಟ್ ಕೈಚೆಲ್ಲಿದರು.

ಅದಿಲ್ ರಶೀದ್(1-7), ಮಾರ್ಕ್ ವುಡ್(1-9) ಹಾಗೂ ಜೋಫ್ರಾ ಅರ್ಚರ್(1-11)ತಲಾ ಒಂದು ವಿಕೆಟ್ ಪಡೆದರು.

ಭಾರತ ತಂಡದಲ್ಲಿ ಹಿಟ್ ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಮತ್ತೊಂದೆಡೆ ಗಾಯದಿಂದಾಗಿ ದೀರ್ಘ ಸಮಯದಿಂದ ತಂಡದಿಂದ ಹೊರಗುಳಿದಿದ್ದ ಬಲಗೈ ಅನುಭವಿ ವೇಗದ ಬೌಲರ್ ಭುವನೇಶ್ವರ ಕುಮಾರ್ ಪುನರಾಗಮನ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News