×
Ad

ಉಡುಪಿ: ಕಾಯಕ ಶರಣರ ಜಯಂತಿ ಆಚರಣೆ

Update: 2021-03-12 20:00 IST

ಉಡುಪಿ, ಮಾ.12: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶುಕ್ರವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಾಯಕ ಶರಣರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮಾದರ ಚನ್ನಯ್ಯ, ಮಾದರ ಧೂಳಯ್ಯ, ಡೋಹರ ಕಕ್ಕಯ್ಯ, ಸಮಗಾರ ಹರಳಯ್ಯ, ಉರಿಲಿಂಗ ಪೆದ್ದಿ ಕಾಯಕ ಶರಣರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಜಿ ಜಗದೀಶ್ ಪುಷ್ಪಾರ್ಚನೆ ಮಾಡಿದರು.

ಕಾರ್ಯಕ್ರಮದಲ್ಲಿ ಜಿಪಂ ಉಪ ಕಾರ್ಯದರ್ಶಿ ಕಿರಣ್ ಪಡ್ನೇಕರ್ ಮತ್ತು ಸಮುದಾಯದ ಮುಖಂಡರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ ಸ್ವಾಗತಿಸಿ, ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News