ಅಂಜಾರಿನಲ್ಲಿ ಜಾನಪದ ವೈಭವ ಕಾರ್ಯಕ್ರಮ

Update: 2021-03-12 14:40 GMT

ಹಿರಿಯಡ್ಕ, ಮಾ.12: ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಉಡುಪಿ ಜಿಲ್ಲಾ ಘಟಕ, ತಲ್ಲೂರ್ ಫ್ಯಾಮಿಲಿ ಟ್ರಸ್ಟ್ ಉಡುಪಿ ಮತ್ತು ಶ್ರೀ ದುರ್ಗಾಪರಮೇಶ್ವರಿ ಮರಾಟಿ ಸಮುದಾಯ ಕಲಾ ಸಂಘ ಮೂಡು ಅಂಜಾರು ಹಿರಿಯಡಕ ಇವುಗಳ ಸಂಯುಕ್ತ ಆಶ್ರಯದಲ್ಲಿ ಜಾನಪದ ವೈಭವ ಕಾರ್ಯಕ್ರಮವು ಇತ್ತೀಚೆಗೆ ಅಂಜಾರಿನಲ್ಲಿ ಜರಗಿತು.

ಕಾರ್ಯಕ್ರಮವನ್ನು ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ದುರ್ಗಾಪರ ಮೇಶ್ವರಿ ಮರಾಟಿ ಸಮುದಾಯ ಕಲಾ ಸಂಘದ ಅಧ್ಯಕ್ಷ ವೆಂಕಟೇಶ ನಾರ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಹಿರಿಯಡ್ಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ.ನಿಕೇತನ ಮಾತನಾಡಿದರು.

ಪರಿಷತ್ತಿನ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಸಾಧನಾ ಕಿಣಿ, ಖಜಾಂಚಿ ಜಯರಾಮ ಆಚಾರ್ಯ, ಸಂಘಟನಾ ಕಾರ್ಯದರ್ಶಿ ಗೋಪಾಲ ಬಂಗೇರ ಉಪಸ್ಥಿತರಿದ್ದರು. ಕಲಾವಿದ ಮತ್ತು ನಿವೃತ್ತ ಶಿಕ್ಷಕ ಕಲ್ಮಾಡಿ ಶೇಖರ ಪೂಜಾರಿ ಅವರನ್ನು ಸನ್ಮಾನಿಸ ಲಾಯಿತು.

ಜಿಲ್ಲಾ ಕಾರ್ಯದರ್ಶಿ ರವಿರಾಜ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿ ದರು. ರವಿರಾಜ ನಾಯಕ್ ಮತ್ತು ಕುಮಾರಿ ರಕ್ಷಿತಾ ನಾಯ್ಕ ಕಾರ್ಯಕ್ರಮ ನಿರೂಪಿಸಿದರು. ವಿವಿಧ ಕಲಾತಂಡಗಳಿಂದ ಜಡೆ ಕೋಲಾಟ, ಹೋಳಿ ಕುಣಿತ, ಹಾಲಕ್ಕಿ ಸುಗ್ಗಿ ಕುಣಿತ, ಲಂಬಾಣಿ ಕುಣಿತ, ಹೌಂಡೇರಾಯನ ವಾಲಗ ಜಾನಪದ ಕಲೆಗಳನ್ನು ಪ್ರದರ್ಶಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News