ಕರ್ನಾಟಕ ರಾಜ್ಯ ಮುಕ್ತ ವಿವಿ: 2020-21ನೇ ಸ್ನಾತಕ, ಸ್ನಾತಕೋತ್ತರ ಕೋರ್ಸ್ ಗಳ ಪ್ರವೇಶಾತಿ ಆರಂಭ

Update: 2021-03-12 14:41 GMT

ಬೆಂಗಳೂರು, ಮಾ.12: ಮೈಸೂರಿನ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ ವತಿಯಿಂದ 2020-21ನೇ(ಜನವರಿ ಆವೃತ್ತಿ) ಸಾಲಿನ ಪ್ರವೇಶಾತಿ ಆರಂಭಿಸಿದ್ದು, ಸ್ನಾತಕ, ಸ್ನಾತಕೋತ್ತರ ಕೋರ್ಸ್ ಗಳಾದ ಬಿಎ, ಬಿಕಾಂ, ಎಂಎ, ಎಂಸಿಜೆ, ಎಂಕಾಂ, ಬಿಎಲ್‍ಐಎಸ್ಸಿ, ಎಂಎಲ್‍ಐಎಸ್ಸಿ, ಎಂಎಸ್ಸಿ, ಎಂಬಿಎ, ಪಿಜಿ ಡಿಪ್ಲೋಮಾ ಪ್ರೋಗ್ರಾಮ್ಸ್, ಡಿಪ್ಲೋಮಾ ಪ್ರೋಗ್ರಾಮ್ಸ್, ಸರ್ಟಿಫಿಕೇಟ್ ಪ್ರೋಗ್ರಾಮ್ಸ್ ಗಳಿಗೆ ಪ್ರವೇಶಾತಿಯನ್ನು ಮಾಡಿಕೊಳ್ಳಲಾಗುತ್ತಿದೆ.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಮಲ್ಲೇಶ್ವರಂ ಮಹಿಳಾ ಪ್ರಾದೇಶಿಕ ಕೇಂದ್ರದಲ್ಲಿ ಮಹಿಳಾ ಮತ್ತು ಪುರುಷ ಎಲ್ಲರಿಗೂ ಪ್ರವೇಶಾತಿಗೆ ಅವಕಾಶ ಕಲ್ಪಿಸಿದೆ. ಪ್ರಥಮ ವರ್ಷದ ಈ ಮೇಲ್ಕಂಡ ಕೋರ್ಸ್ ಗಳ ಪ್ರವೇಶಾತಿಗೆ ದಂಡ ಶುಲ್ಕವಿಲ್ಲದೆ ಎ.12, 200ರೂ. ದಂಡ ಶುಲ್ಕದೊಂದಿಗೆ ಎ.26ರೂ. ಹಾಗೂ 400ರೂ. ದಂಡ ಶುಲ್ಕದೊಂದಿಗೆ ಎ.30 ಕಡೆಯ ದಿನಾಂಕವಾಗಿರುತ್ತದೆ.

ವಿದ್ಯಾರ್ಥಿಗಳು ಕರಾಮುವಿಯ ಅಧಿಕೃತ ವೆಬ್‍ಸೈಟ್ www.ksoumysuru.ac.inನಲ್ಲಿ KSOU Admission Portal ಮೂಲಕ ಈ ಮೇಲ್ಕಂಡ ಪದವಿಗಳಿಗೆ ಅನ್‍ಲೈನ್‍ನಲ್ಲಿ ಅರ್ಜಿ ಭರ್ತಿ ಮಾಡಿ ನಂತರ ಪ್ರಾದೇಶಿಕ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡಿ, ಅನ್‍ಲೈನ್ ಮುಖಾಂತರ ಪ್ರವೇಶಾತಿ ಶುಲ್ಕ ಪಾವತಿಸಿ ಪ್ರವೇಶಾತಿ ಪಡೆಯಲು ಪ್ರಾದೇಶಿಕ ನಿರ್ದೇಶಕ ಡಾ.ಲೋಕೇಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ನಿರ್ದೇಶಕರು, ಕರಾಮುವಿ ಮಹಿಳಾ ಪ್ರಾದೇಶಿಕ ಕೇಂದ್ರ, ಸರಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜು, 4ನೇ ಮುಖ್ಯರಸ್ತೆ, 13ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-03. ಕಚೇರಿ ದೂ.080 23448811, 98445-06629, 96203-95584, 77608-48564ಕ್ಕೆ ಸಂಪರ್ಕಿಸಲು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News