×
Ad

ಆಸ್ಪತ್ರೆಯಿಂದ ಬಿಡುಗಡೆಯಾದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

Update: 2021-03-12 20:11 IST

ಕೋಲ್ಕತಾ: ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆಯಾದರು.

ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಎರಡು ದಿನಗಳ ಹಿಂದೆ ವಿಧಾನಸಭಾ ಚುನಾವಣೆಗೆ ನಂದಿಗ್ರಾಮದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಲು ಹೋದಾಗ ಅಪರಿಚಿತರ ದಾಳಿಯಿಂದ ಗಾಯಗೊಂಡು ಕೋಲ್ಕತಾದ ಆಸ್ಪತ್ರೆಗೆ ದಾಖಲಾಗಿದ್ದರು. ಮಮತಾ ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಇನ್ನೂ 48 ಗಂಟೆಗಳ ಕಾಲ ಅವರ ಮೇಲೆ ನಿಗಾ ಇಡಲು ವೈದ್ಯಕೀಯ ತಂಡ ಬಯಸಿತ್ತು. ತನ್ನನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡುವಂತೆ ಅವರು ಪದೇ ಪದೇ ವಿನಂತಿಸಿದರು. ವೈದ್ಯಕೀಯ ಸಲಹೆಯ ಬಳಿಕ ಮಮತಾ ಅವರ ಕೋರಿಕೆಯ ಮೇರೆಗೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. 7 ದಿನಗಳ ಬಳಿಕ ವೈದ್ಯಕೀಯ ತಪಾಸಣೆ ನಡೆಸುವಂತೆ ಸೂಚಿಸಲಾಗಿದೆ ಎಂದು ಕೋಲ್ಕತಾದಲ್ಲಿ ಮಮತಾ ಅವರಿಗೆ ಚಿಕಿತ್ಸೆ ನೀಡುತ್ತಿರುವ ಎಸ್ ಎಸ್ ಕೆಎಂ ಆಸ್ಪತ್ರೆಯ ವೈದ್ಯರುಗಳು ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.

ವೀಲ್ ಚೇರ್ ಮೂಲಕವೇ ಮಮತಾ ಅವರನ್ನು ಆಸ್ಪತ್ರೆಯಿಂದ ಹೊರ ಕರೆ ತರಲಾಯಿತು. ಈ ಸಂದರ್ಭದಲ್ಲಿ ಅವರು ಕಾರ್ಯಕರ್ತರಿಗೆ ಕೈ ಮುಗಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News