ಖಾಸಗಿ ಕಾಲೇಜು ಉಪನ್ಯಾಸಕ ನೇಣಿಗೆ ಶರಣು
Update: 2021-03-12 20:15 IST
ಬೆಂಗಳೂರು, ಮಾ.12: ಮರವೊಂದಕ್ಕೆ ನೇಣು ಬಿಗಿದುಕೊಂಡು ಖಾಸಗಿ ಕಾಲೇಜಿನ ಉಪನ್ಯಾಸಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿಡ್ಲಘಟ್ಟದ ಸೋಮನಹಳ್ಳಿಯಲ್ಲಿ ನಡೆದಿದೆ.
ಮೃತನನ್ನು ಸೋಮನಹಳ್ಳಿಯ ನಿವಾಸಿ ಮುರುಳಿ(30) ಎಂದು ಗುರುತಿಸಲಾಗಿದೆ. ನಗರದ ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕನಾಗಿ ಕೆಲಸ ಮಾಡುತ್ತಿದ್ದ ಮುರುಳಿ, ಯುವತಿ ಒಬ್ಬರನ್ನು ಪ್ರೀತಿಸುತ್ತಿದ್ದರು. ಈ ವಿಚಾರ ಯುವತಿ ಪೋಷಕರಿಗೆ ತಿಳಿದು ಇಬ್ಬರ ಪ್ರೀತಿಗೆ ವಿರೋಧ ವ್ಯಕ್ತಪಡಿಸಿ ಗಲಾಟೆ ಮಾಡಿದ್ದರು. ಇದರಿಂದ ಮನನೊಂದ ಮುರುಳಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಮೃತ ಯುವಕನ ಜೇಬಿನಲ್ಲಿ ಡೆತ್‍ನೋಟ್ ಸಹ ಪತ್ತೆಯಾಗಿದ್ದು, ದಿಬ್ಬೂರ ಹಳ್ಳಿ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಶಿಡ್ಲಘಟ್ಟ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.